ಬೆಂಗಳೂರು: ರಾಜ್ಯ ಬಿಜೆಪಿ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಬಿ.ವೈ.ವಿಜಯೇಂದ್ರ ಅವರು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಡಾ.ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಕರ್ನಾಟಕದ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡ ಬಳಿಕ ಶನಿವಾರ ಬೆಂಗಳೂರಿನ ವಿಜಯನಗರದ ಶ್ರೀ ಆದಿಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿ ಮಹಾ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದುಕೊಂಡರು.

ಈ ಸಂದರ್ಭದಲ್ಲಿ ಬಿ.ವೈ. ವಿಜಯೇಂದ್ರ ಅವರ ಆಪ್ತ ಬೆಂಬಲಿಗರು ಉಪಸ್ಥಿತರಿದ್ದರು.