ಚೆನ್ನಾಗಿ ಕಾಣುತ್ತಿಲ್ಲವೆಂದು 6ನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೈದರೇ ವೈದ್ಯಕೀಯ ವಿದ್ಯಾರ್ಥಿನಿ?

ಮಂಗಳೂರು: ನಗರದ ಖಾಸಗಿ ಶಿಕ್ಷಣ ಸಂಸ್ಥೆಯೊಂದರ ಎಂಬಿಬಿಎಸ್ ಕಲಿಯುವ ವಿದ್ಯಾರ್ಥಿನಿಯೊಬ್ಬರು ಹಾಸ್ಟೆಲ್ ಕಟ್ಟಡದಿಂದ ಹಾರಿ ಆತ್ಮಹತ್ಯೆಗೈದ ಘಟನೆ ಸೋಮವಾರ ಮುಂಜಾನೆ ನಡೆದಿದೆ.

ಆತ್ಮಹತ್ಯೆಗೈದ ವಿದ್ಯಾರ್ಥಿನಿಯನ್ನು ಪ್ರಕೃತಿ ಶೆಟ್ಟಿ (20) ಎಂದು ಗುರುತಿಸಲಾಗಿದೆ. ಈ ವಿದ್ಯಾರ್ಥಿನಿಯು ಮೆಡಿಕಲ್ ಕಾಲೇಜಿಗೆ ಸಂಬಂಧಿಸಿದ ಹಾಸ್ಟೆಲ್‌ನಲ್ಲಿದ್ದರು‌‌‌. “ತಾನು ತುಂಬಾ ತೋರ ಇದ್ದು, ಚೆನ್ನಾಗಿ ಕಾಣುತ್ತಿಲ್ಲ. ಇದರಿಂದ ಜೀವನದಲ್ಲಿ ಜಿಗುಪ್ಸೆ ಹೊಂದಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ” ಎಂದು ಡೆತ್ ನೋಟಿನಲ್ಲಿ ಬರೆದಿದ್ದಾರೆ.

ಸೋಮವಾರ ಮುಂಜಾನೆ ಸುಮಾರು 3 ಗಂಟೆಗೆ ಹಾಸ್ಟೆಲ್ ಕಟ್ಟಡದ 6ನೆ ಮಹಡಿಯಿಂದ ಹಾರಿ ಆತ್ಮಹತ್ಯೆ‌ ಗೈದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top