ಅಕ್ಷಯ್ ಕಲ್ಲೇಗ ಹತ್ಯೆಯನ್ನು ನಾವು ಖಂಡಿಸುತ್ತೇವೆ | ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು | ಹತ್ಯೆಯಾದ ಟೈಗರ್ಸ್ ಕಲ್ಲೇಗ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಮನೆಗೆ ಸಭಾಪತಿ ಯು.ಟಿ. ಖಾದರ್ ಭೇಟಿ  

ಪುತ್ತೂರು: ಇತ್ತೀಚೆಗೆ ಹತ್ಯೆಯಾದ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರ ಮನೆಗೆ ರಾಜ್ಯ ವಿಧಾನಸಭಾ ಸಭಾಪತಿ ಯು.ಟಿ.ಖಾದರ್ ಸೋಮವಾರ ಭೇಟಿ ನೀಡಿ ಮನೆ ಮಂದಿಗೆ ಸಾಂತ್ವ ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಭಾಪತಿ ಯು.ಟಿ. ಖಾದರ್, ಸಾಮಾಜಿಕ ಮತ್ತು ಧಾರ್ಮಿಕವಾಗಿ ಸೇವೆ ಸಮರ್ಪಿಸಿ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದ ಅಕ್ಷಯ್ ಹತ್ಯೆಯನ್ನು ನಾವು ಖಂಡಿಸುತ್ತೇವೆ. ಪ್ರತಿಯೊಂದು ಪ್ರಾಣಕ್ಕೆ ಅದರದ್ದೇ ಆದ ಮಹತ್ವವಿದೆ. ಈ ನಿಟ್ಟಿನಲ್ಲಿ  ಸಮಾಜಘಾತುಕ ಶಕ್ತಿಗಳನ್ನು ಮಟ್ಟ ಹಾಕುವಲ್ಲಿ ಪೊಲೀಸರು ಪ್ರಯತ್ನಿಸಬೇಕು ಹಾಗೂ ಸವಾಲಾಗಿ ಸ್ವೀಕರಿಸಬೇಕು. ಇಂತಹಾ ಘಟನೆ ಮುಂದಿನ ದಿನಗಳಲ್ಲಿ ನಡೆಯಬಾರದು ಎಂದರೆ ಹತ್ಯೆ ಮಾಡಿದ ಆರೋಪಿಗಳ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಅದು ಇಲಾಖೆಯ ಜವಾಬ್ದಾರಿಯಾಗಿದೆ. ಈ ಕುರಿತು ಪೊಲೀಸ್ ಇಲಾಖೆ ಜತೆ ಮಾತನಾಡುತ್ತೇನೆ ಎಂದ ಅವರು, ಪುತ್ತೂರಿನಲ್ಲಿ ಶಾಂತ ರೀತಿಯ ವಾತಾವರಣ ನಿರ್ಮಾಣ ಮಾಡುವುದು ಪ್ರತಿಯೊಬ್ಬನ ಜವಾಬ್ದಾರಿ ಎಂದರು.

ಈ ಸಂದರ್ಭದಲ್ಲಿ ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದಾಲಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top