ಸುಳ್ಯ: ಯೋಗಾಸನ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಕಾಣಿಯೂರು ಪ್ರಗತಿ ಆಂಗ್ಲ ಮಾಧ್ಯಮ ಶಾಲಾ 7ನೇ ತರಗತಿ ವಿದ್ಯಾರ್ಥಿನಿ ಶ್ರೀಮಾ ಕೆ.ಎಚ್. ಹುದೇರಿ ಅವರ ಮನೆಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಮಂಗಳವಾರ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಶಾಸಕರು ಶ್ರೀಮಾ ಕೆ.ಎಚ್. ಅವರನ್ನು ಶಾಲು ಹೊದಿಸಿ, ಪೇಟ ತೊಡಿಸಿ, ಸ್ಮರಣಿಕೆ ನೀಡಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಅಧ್ಯಕ್ಷ ವಸಂತ ನಡುಬೈಲು, ಮುರುಳ್ಯ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಜಾನಕಿ ಮುರುಳ್ಯ, ಗ್ರಾಮ ಪಂಚಾಯಿತಿ ಸದಸ್ಯ ಕರುಣಾಕರ ಹುದೇರಿ, ಸಿಆರ್ ಪಿ ಜಯಂತ, ಶ್ರೀಮಾ ಕೆ.ಎಚ್. ಹೆತ್ತವರಾದ ಕುಶಾಲಪ್ಪ, ಸುಜಿತಾ ಹಾಗೂ ಮನೆಯವರು, ಸ್ಥಳೀಯರು ಉಪಸ್ಥಿತರಿದ್ದರು.