ಪುತ್ತೂರು: ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕ ಸಂಸ್ಥೆಯ ಪ್ರಾದೇಶಿಕ ಕಚೇರಿ ಉದ್ಘಾಟನೆ ಹಾಗೂ ತೆಂಗು ಉತ್ಪನ್ನಗಳ ಬಿಡುಗಡೆ ಕಾರ್ಯಕ್ರಮ ನ.16 ಗುರುವಾರ ಮಂಗಳೂರಿನ ಮರೋಳಿ ಸೂರ್ಯನಾರಾಯಣ ದೇವಸ್ಥಾನದ ಬಳಿ ನಡೆಯಲಿದೆ.
ಬೆಳಿಗ್ಗೆ 10 ಗಂಟೆಗೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಪರಮಪೂಜ್ಯ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು ದೀಪ ಪ್ರಜ್ವಲನೆ ಮಾಡಿ ಆಶೀರ್ವಚನ ನೀಡಲಿದ್ದಾರೆ. ರಾಜ್ಯ ಸರಕಾರ ಸಭಾಪತಿ ಯು.ಟಿ.ಖಾದರ್ ಕಚೇರಿ ಉದ್ಘಾಟಿಸುವರು.
ಮುಖ್ಯ ಅತಿಥಿಗಳಾಗಿ ಮಂಗಳೂರು ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್, ಕಾಸರಗೋಡು ಸಿಪಿಸಿಆರ್‍ಐ ನಿರ್ದೇಶಕ ಡಾ.ಹೆಬ್ಬಾರ್ ಕೆ.ಬಿ., ಮಂಗಳೂರು ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆಂಪೇಗೌಡ ಹೆಚ್., ದ.ಕ.ನಬಾರ್ಡ್ ಜಿಲ್ಲಾ ಅಭಿವೃದ್ಧಿ ಕಾರ್ಯದರ್ಶಿ ರವಿಕಿರಣ್ ಪುಣಚ, ಮಂಗಳೂರು ಭಾರತೀಯ ವಿಕಾಸ ಟ್ರಸ್ಟ್ ಜಿಲ್ಲಾ ಮುಖ್ಯಸ್ಥ ಜೀವನ್, ಮಂಗಳೂರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಹೆಚ್.ಆರ್.ನಾಯ್ಕ್, ಮರೋಳಿ ವಾರ್ಡ್ ಕಾರ್ಪೋರೇಟರ್ ಕೇಶವ ಮರೋಳಿ, ಮಂಗಳೂರು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ರಮೇಶ್, ರಾಜ್ಯ ರೈತ ಹಸಿರು ಸೇನೆ ದ.ಕ.ಜಿಲ್ಲಾ ಸಂಚಾಲಕ ರೂಪೇಶ್ ರೈ ಅಲಿಮಾರ್ ಪಾಲ್ಗೊಳ್ಳಲಿದ್ದಾರೆ ಎಂದು ಸಂಸ್ಥೆಯ ಜಿಲ್ಲಾಧ್ಯಕ್ಷ ಕುಸುಮಾಧರ್ ಎಸ್.ಕೆ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.