ಬಿಜೆಪಿ ರಾಜ್ಯಾಧ್ಯಕ್ಷ ಅಧಿಕಾರ ಹಸ್ತಾಂತರಿಸಿದ ನಳಿನ್ ಕುಮಾರ್ ಕಟೀಲ್

ಬೆಂಗಳೂರು: ಗಣಹೋಮ, ದುರ್ಗಾಹೋಮದ ಬಳಿಕ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಅಧಿಕಾರ ಸ್ವೀಕರಿಸಿದ್ದಾರೆ.

ರಾಜ್ಯಾಧ್ಯಕ್ಷರಾಗಿದ್ದ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ಅಧಿಕಾರ ಹಸ್ತಾಂತರ ಮಾಡಿದರು. ಈ ಸಂದರ್ಭ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಆರಗ ಜ್ಞಾನೇಂದ್ರ, ಸಂಸದರಾದ ರಾಘವೇಂದ್ರ, ತೇಜಸ್ವಿ ಸೂರ್ಯ, ಅಶೋಕ್, ಗೋವಿಂದ ಕಾರಜೋಳ ಮೊದಲಾದವರು ಉಪಸ್ಥಿತರಿದ್ದರು.

ಈ ಸಂದರ್ಭ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿರುವ ನಳಿನ್ ಕುಮಾರ್ ಕಟೀಲ್ ಅವರು, ದೇಶದ ಅತಿದೊಡ್ಡ ಪಕ್ಷದ ರಾಜ್ಯಾಧ್ಯಕ್ಷನಾಗಿ 4 ವರ್ಷ 3 ತಿಂಗಳ ಅವಧಿಯಲ್ಲಿ ಶ್ರದ್ಧೆಯಿಂದ ದುಡಿದಿದ್ದೇನೆ. ಮಾತೃ ಸಮಾನವಾಗಿರುವ ನಮ್ಮ ಪಕ್ಷ ಮತ್ತು ಹಿರಿಯರು ಸಾಮಾನ್ಯ ಕಾರ್ಯಕರ್ತನಾದ ನನಗೆ ಪಕ್ಷದ ರಾಜ್ಯದ ಅತ್ಯುನ್ನತ ಜವಾಬ್ದಾರಿ ವಹಿಸಿದ್ದು, ಈ ಹೊಣೆಗಾರಿಕೆಯನ್ನು ನಿಮ್ಮೆಲ್ಲರ ಸಹಕಾರದಿಂದ ಪರಿಪೂರ್ಣತೆಯಿಂದ ನಿರ್ವಹಿಸಿದ್ದೇನೆ. ನನಗೆ ಕೊಟ್ಟ ಸಹಕಾರವನ್ನು ಬಿ.ವೈ.ವಿಜಯೇಂದ್ರಗೂ ಕೊಡಬೇಕು. ರಾಜ್ಯಾಧ್ಯಕ್ಷರಾದ ವಿಜಯೇಂದ್ರಗೆ ನಾವೆಲ್ಲರೂ ಜೊತೆಯಾಗಿ ನಿಲ್ಲುತ್ತೇವೆ. ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಸ್ಥಾನಗಳಲ್ಲೂ ಗೆಲ್ಲುವ ಪ್ರಯತ್ನ ಮಾಡುತ್ತೇವೆಂದು ತಿಳಿಸಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top