ತಾಯಿ, ಮಕ್ಕಳ ಹತ್ಯೆಗೆ  3 ಕಾರಣ ಕೊಟ್ಟ ಆರೋಪಿ: ಎಸ್ಪಿ ಡಾ. ಅರುಣ್

ಉಡುಪಿ: ನೇಜಾರಿನಲ್ಲಿ ನಡೆದ ತಾಯಿ, ಮಕ್ಕಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರಿಂದ ಬಂಧನಕ್ಕೊಳಗಾದ ಆರೋಪಿ ಪ್ರವೀಣ್ ಚೌಗಲೆ (39) ತಾನೇ ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಈ ಹಿನ್ನಲೆಯಲ್ಲಿ ಆತನ ಬಂಧನವಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ತಿಳಿಸಿದ್ದಾರೆ.

ಉಡುಪಿ ಎಸ್ಪಿ ಕಚೇರಿಯಲ್ಲಿ ಮಾಹಿತಿ ನೀಡಿದ ಅವರು, ತಾಂತ್ರಿಕ ಹಾಗೂ ಇತರ ಸಾಕ್ಷ್ಯಾಧಾರಗಳಿಂದ ಈತನೆ ಕೊಲೆ ಮಾಡಿರುವುದು ದೃಢಪಟ್ಟಿದೆ. ಕೃತ್ಯಕ್ಕೆ ಬಳಸಿದ ಆಯುಧವನ್ನು ಇನ್ನಷ್ಟೇ ವಶಪಡಿಸಿಕೊಳ್ಳಬೇಕಾಗಿದೆ ಎಂದರು.

ಮಂಗಳೂರು ಏರ್ ಇಂಡಿಯಾದಲ್ಲಿ ಕ್ಯಾಬಿನ್ ಕ್ರೂ ಮೆಂಬರ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿ ಪ್ರವೀಣ್, ಗಗನಸಖಿ ಐನಾಝ್ ಮೇಲೆ ದ್ವೇಷದಲ್ಲಿ ಈ ಕೊಲೆ ಮಾಡಿದ್ದಾನೆ. ತಡೆಯಲು ಬಂದ ತಾಯಿ ಹಾಗೂ ಇಬ್ಬರು ಮಕ್ಕಳನ್ನು ಕೂಡ ಚೂರಿಯಿಂದ ಇರಿದು ಕೊಲೆ ಮಾಡಿದ್ದಾನೆ ಎಂದು ಅವರು ಹೇಳಿದರು.



































 
 

ವಿಚಾರಣೆ ವೇಳೆ ಆರೋಪಿ ಕೊಲೆಗೆ ಮೂರು ಉದ್ದೇಶಗಳನ್ನು ತಿಳಿಸಿದ್ದು, ಅದನ್ನು ಪರಿಶೀಲನೆ ನಡೆಸಿ ದೃಢಪಡಿಸಲಾಗುವುದು. ವಿವಾಹಿತನಾಗಿರುವ ಆರೋಪಿ, ಮಹಾರಾಷ್ಟ್ರ ಸಾಂಗ್ಲಿ ಮೂಲದವನಾಗಿದ್ದು ಹಲವು ವರ್ಷಗಳಿಂದ ಮಂಗಳೂರಿನಲ್ಲಿ ವಾಸ ಮಾಡುತ್ತಿದ್ದಾನೆ ಎಂದು ಎಸ್ಪಿ ತಿಳಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top