ಬೆಂಗಳೂರು: ದೀಪಾವಳಿ ಹಬ್ಬದ ನಿಮಿತ್ತ ತಮ್ಮ ಮನೆಗೆ ದೀಪಾಲಂಕಾರ ಮಾಡಲು ವಿದ್ಯುತ್ ಕಂಬದಿಂದ ಅಕ್ರಮವಾಗಿ ವಿದ್ಯುತ್ ಎಳೆದ ಆರೋಪದ ಮೇಲೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಬೆಸ್ಕಾಂ ವಿಧಿಸಿದ್ದ ದಂಡವನ್ನು ಪಾವತಿಸಿರುವ ಬಗ್ಗೆ ವರದಿಯಾಗಿದೆ.
ಹೆಚ್.ಡಿ. ಕುಮಾರಸ್ವಾಮಿ ಅವರು ಬೆಸ್ಕಾಂಗೆ 68,526 ರೂ. ದಂಡದ ಮೊತ್ತವನ್ನು ಪಾವತಿಸಿದ್ದಾರೆ ಎಂದು ಎಂದು ತಿಳಿದು ಬಂದಿದೆ.
ಕುಮಾರಸ್ವಾಮಿ ಅವರ ಮನೆಯನ್ನು ಪರಿಶೀಲಿಸಿದ ಬೆಸ್ಕಾಂ ಅಧಿಕಾರಿಗಳು ಏಳು ದಿನಗಳೊಳಗೆ ದಂಡ ಪಾವತಿಸುವಂತೆ ಸೂಚಿಸಿದ್ದರು. ಜಯನಗರದಲ್ಲಿರುವ ಬೆಸ್ಕಾಂ ವಿಜಿಲೆನ್ಸ್ ಕಚೇರಿಯಲ್ಲಿ ಮಂಗಳವಾರ ಕರ್ನಾಟಕ ವಿದ್ಯುತ್ ಕಾಯ್ದೆಯಡಿ ಎಫ್ಐಆರ್ ದಾಖಲಾಗಿತ್ತು. ವೈರಲ್ ಆಗಿರುವ ವಿಡಿಯೋ ಕ್ಲಿಪ್ ಆಧರಿಸಿ ದೂರು ದಾಖಲಿಸಲಾಗಿದೆ ಎಂದು ಇಂಧನ ಇಲಾಖೆಯ ಹೇಳಿಕೆ ತಿಳಿಸಿತ್ತು.