ಪುತ್ತೂರು: ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಮೆಲ್ಕಾರ್ ಬಂಟ್ವಾಳ ಕೇಂದ್ರ ಸಮಿತಿ ಮತ್ತು ಪುತ್ತೂರು ತಾಲೂಕು ಘಟಕದ ವತಿಯಿಂದ ಪುತ್ತೂರು ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಿಂದ ಖಾಸಗಿ ಬಸ್ ನಿಲ್ದಾಣದ ಸಂಪರ್ಕ ರಸ್ತೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ, ಸಾಮಾಜಿಕ ಮುಂದಾಳು ದಿ.ಸುಧಾಕರ ಶೆಟ್ಟಿ ಅವರ ಹೆಸರು ಇಡುವಂತೆ ಪುತ್ತೂರು ಸಹಾಯಕ ಆಯುಕ್ತರು ಹಾಗೂ ನಗರಸಭೆ ಪೌರಾಯುಕ್ತರಿಗೆ ಮನವಿ ಸಲ್ಲಿಸಲಾಯಿತು.
ಪ್ರತಿಷ್ಠಾನದ ಅಧ್ಯಕ್ಷ ಕಯ್ಯಾರು ನಾರಾಯಣ ಭಟ್ ನೇತೃತ್ವದಲ್ಲಿ ಈ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಪ್ರತಿಷ್ಠಾನದ ಉಪಾಧ್ಯಕ್ಷರಾದ ಜಯರಾಮ ಭಂಡಾರಿ ಧರ್ಮಸ್ಥಳ, ಅನಾರು ಕೃಷ್ಣಶರ್ಮ, ಪುತ್ತೂರು ಘಟಕದ ಪದಾಧಿಕಾರಿಗಳಾದ ಮಹಾಬಲ ರೈ ಒಳತಡ್ಕ, ಚಂದ್ರಶೇಖರ ಆಳ್ವ ಪಡುಮಲೆ, ಭವಾನಿ ಶಂಕರ ಶೆಟ್ಟಿ ಪುತ್ತೂರು, ಧಾರ್ಮಿಕ ಪರಿಷತ್ತಿನ ಮಾಜಿ ಸದಸ್ಯ ನ್ಯಾಯವಾದಿ ಜಗನ್ನಿವಾಸ ರಾವ್ ಉಪಸ್ಥಿತರಿದ್ದರು.