ಆಸ್ಪತ್ರೆಗೆ ಭೇಟಿ ನೀಡಿ ಸಂಜೀವ ಮಠಂದೂರು ಆರೋಗ್ಯ ವಿಚಾರಿಸಿದ ಸಂಸದ ನಳಿನ್ ಕುಮಾರ್ ಕಟೀಲ್

ಪುತ್ತೂರು: ಹಾವು ಕಡಿತಕ್ಕೊಳಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಶಾಸಕ ಸಂಜೀವ ಮಠಂದೂರು ಅವರನ್ನು ಸಂಸದ ನಳಿನ್ ಕುಮಾರ್ ಕಟೀಲ್ ಶುಕ್ರವಾರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಗುರುವಾರ ಸಂಜೆ ಮನೆಯಲ್ಲಿ ವಾಕಿಂಗ್ ಮಾಡುತ್ತಿದ್ದ ವೇಳೆ ವಿಷಪೂರಿತ ಹಾವು ಕಡಿದಿತ್ತು. ಈ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು.

ಈ ಸಂದರ್ಭದಲ್ಲಿ ಮುರಳಿಕೃಷ್ಣ ಹಸಂತಡ್ಕ, ಚನಿಲ ತಿಮ್ಮಪ್ಪ ಶೆಟ್ಟಿ, ಆರ್.ಸಿ ನಾರಾಯಣ್, ಅರುಣ್ ವಿಟ್ಲ, ಸೀತಾರಾಮ ರೈ ಕೆದಂಬಾಡಿಗುತ್ತು ಸಹಿತ ಹಲವರು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top