ಪುತ್ತೂರು: ಕೆಎಸ್‌ಆರ್‌ಟಿಯ ಪುತ್ತೂರು ಘಟಕಕ್ಕೆ ನೂತನವಾಗಿ ಆಗಮಿಸಿದ ಆರು ಬಸ್‌ಗಳಿಗೆ ಸೋಮವಾರ ಚಾಲನೆ ನೀಡಲಾಯಿತು.
ಶಾಸಕ ಅಶೋಕ್ ಕುಮಾರ್ ರೈ ಹಸಿರು ಧ್ವಜ ಪ್ರದರ್ಶಿಸುವ ಮೂಲಕ ಚಾಲನೆ ನೀಡಿ, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಸಾರಿಗೆ ಸಚಿವರೊಂದಿಗೆ ಚರ್ಚಿಸಿದಾಗ 25-30 ಜೊಸ ಬಸ್‌ಗಳನ್ನು ನೀಡುವುದಾಗಿ ತಿಳಿಸಿದ್ದಾರೆ. ಈ ಪೈಕಿ ಎರಡು ಪಲ್ಲಕಿ ಬಸ್ ಹಾಗೂ 8 ಕರ್ನಾಟಕ ಸಾರಿಗೆ ಬಸ್‌ಗಳು ಬಂದಿವೆ. ಸ್ಥಳೀಯವಾಗಿ ಸಂಚರಿಸಲು ತಾತ್ಕಾಲಿಕವಾಗಿ ಆರು ಬಸ್‌ಗಳನ್ನು ನೀಡಿದ್ದಾರೆ. ಇನ್ನೂ ನಾಲ್ಕು ಬಸ್‌ಗಳನ್ನು ನೀಡುವುದಾಗಿ ತಿಳಿಸಿದ ಅವರು, ನಿರ್ವಾಹಕರ ಕೊರೆತಯಿದ್ದು ಹುದ್ದೆ ಭರ್ತಿ ಮಾಡುವಂತೆ ನೇಮಕಾತಿಗೆ ಆದೇಶ ಹೊರಡಿಸಲಾಗಿದೆ ಎಂದರು.
ಅಂತಾರಾಜ್ಯಗಳಿಗೂ ಬಸ್ ಓಡಾಟಕ್ಕೆ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರಿಂದ ಮನವಿಗಳು ಬಂದಿದೆ. ಕಾಟುಕುಕ್ಕೆಯಿಂದ ಬೆಟ್ಟಂಪಾಡಿಗೆ ವಿದ್ಯಾರ್ಥಿಗಳು ಬರುತ್ತಿದ್ದು ಅದಕ್ಕೂ ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.
ವಿಭಾಗೀಯ ನಿಯಂತ್ರಣಾಧಿಕಾರಿ ಜಯಕರ ಶೆಟ್ಟಿ ಮಾತನಾಡಿ, ನೂತನವಾಗಿ ಆಗಮಿಸಿದ ಬಸ್‌ಗಳು ಶಾಂತಿಮೊಗರು-ಕಡಬ, ಪುಣಚ-ವಿಟ್ಲ, ಮುಡಿಪುನಡ್ಕ-ಬಡಗನ್ನೂರು, ರೆಂಜ-ಮುಡಿಪುನಡ್ಕ-ಸುಳ್ಯಪದವು, ನುಳಿಯಾಲು-ಕೊರಿಂಗಿಲ ಮೊದಲಾದ ರಸ್ತೆಗಳಲ್ಲಿ ಕಾರ್ಯನಿರ್ವಹಿಸಲಿದೆ ಎಂದರು.
ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ. ವಿಶ್ವನಾಥ ರೈ, ಉಪಾಧ್ಯಕ್ಷ ಮೌರೀಸ್ ಮಸ್ಕರೇನಸ್, ಪ್ರಮುಖರಾದ ಕೃಷ್ಣಪ್ರಸಾದ್ ಆಳ್ವ, ವೇದನಾಥ ಸುವರ್ಣ, ರೋಶನ್ ರೈ ಬನ್ನೂರು, ರೈ ಎಸ್ಟೇಟ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್‌ನ ಕಾರ್ಯಾಧ್ಯಕ್ಷ ಸುದೇಶ್ ಶೆಟ್ಟಿ, ನಿಹಾಲ್ ರೈ, ವಿಭಾಗೀಯ ಸಂಚಲನಾಧಿಕಾರಿ ಮುರಳೀಧರ ಆಚಾರ್ಯ, ಘಟಕ ವ್ಯವಸ್ಥಾಪಕ ಇಸ್ಮಾಯಿಲ್ ಹಾಗೂ ವಿಭಾಗದ ಹಾಗೂ ಘಟಕ ವಿವಿಧ ಅಧಿಕಾರಿ, ಸಿಬಂದಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.