ಬೆಂಗಳೂರು: ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಬೆಂಗಳೂರು ಇದರ 2023 -25ನೇ ಸಾಲಿನ ನೂತನ ಆಡಳಿತ ಮಂಡಳಿಯ ಪುನರ್ ರಚನೆ ನ. 19ರಂದು ಬೆಂಗಳೂರಿನ ಲಗ್ಗೆರೆಯಲ್ಲಿರುವ ನಮ್ಮನೆ ಆಡಳಿತ ಮಂಡಳಿಯ ಸಭಾಂಗಣದಲ್ಲಿ ನಡೆಯಿತು.
ನಿರ್ದೇಶಕರುಗಳ ಆಡಳಿತ ಮಂಡಳಿ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು.
ಸಮಾಜದ ನೂತನ ಅಧ್ಯಕ್ಷರಾಗಿ ಪಳಂಗಪ್ಪ ಪಾಣತ್ತಲೆ, ಉಪಾಧ್ಯಕ್ಷರಾಗಿ ನಾಗೇಶ್ ಕುಮಾರ್ ಕಲ್ಲುಮುಟ್ಲು, ಗೌರವ ಕಾರ್ಯದರ್ಶಿಯಾಗಿ ಸೋಮಣ್ಣ ಕುಂಭಗೌಡನ, ಖಜಾಂಜಿಯಾಗಿ ರಾಧಾಕೃಷ್ಣ ಗುತ್ತಿಗಾರುಮೂಲೆ, ಜಂಟಿ ಕಾರ್ಯದರ್ಶಿಗಳಾಗಿ ನಾಗೇಶ್ ಉಳುವಾರು ಬಂಟೋಡಿ ಮತ್ತು ನೇಹ ರೋಷನ್ ಪೊರೆಯನ ಆಯ್ಕೆಯಾಗಿದ್ದಾರೆ.