ಗಾಜಾದಲ್ಲಿ ಸಾಮೂಹಿಕ ಅಂತ್ಯಕ್ರಿಯೆ!! | ಮೃತಪಟ್ಟವರಲ್ಲಿ 5850 ಮಕ್ಕಳು!!

ಗಾಜಾ: ಅಕ್ಟೋಬರ್ 7ರಿಂದ ನಡೆಯುತ್ತಿರುವ ಇಸ್ರೇಲಿ ಆಕ್ರಮಣದಿಂದ ಗಾಜಾದಲ್ಲಿ ಮೃತಪಟ್ಟವರ ಸಂಖ್ಯೆ 14,854 ಕ್ಕೆ ಏರಿದೆ. ಇದರಲ್ಲಿ 5,850 ಮಕ್ಕಳು ಸೇರಿದ್ದಾರೆ ಎಂದು ಗಾಜಾಪಟ್ಟಿಯಲ್ಲಿರುವ ಹಮಾಸ್ ಅಧಿಕಾರಿಗಳನ್ನು ಉಲ್ಲೇಖಿಸಿ ಸಿಎನ್ಎನ್ ವರದಿ ಮಾಡಿದೆ. ದಾಳಿಯಲ್ಲಿ ಮೃತಪಟ್ಟವರನ್ನು ಸಾಮೂಹಿಕವಾಗಿ ಅಂತ್ಯಕ್ರಿಯೆ ಮಾಡಲಾಗುತ್ತಿದೆ. 

ಇಸ್ರೇಲ್‌ ನಡೆಸುತ್ತಿರುವ ವಾಯು ಮತ್ತು ಭೂ ದಾಳಿಯಿಂದಾಗಿ ಪ್ರಸ್ತುತ ಅಂಕಿಅಂಶಗಳನ್ನು ಪಡೆಯುವುದು ಸವಾಲಿನ ಕೆಲಸವಾಗಿದೆ. ರಮಲ್ಲಾದಲ್ಲಿರುವ ಪ್ಯಾಲೇಸ್ಟಿನಿಯನ್ ಆರೋಗ್ಯ ಸಚಿವಾಲಯ ಸೋಮವಾರ 12,700 ಮಂಗಳವಾರ 13,000ಕ್ಕೂ ಹೆಚ್ಚು ಸಾವು ನೋವುಗಳನ್ನು ವರದಿ ಮಾಡಿತ್ತು.

ಗಾಜಾ ಪಟ್ಟಿಯ ಮೂಲಗಳಿಂದ ಡೇಟಾವನ್ನು ಸಂಗ್ರಹಿಸುತ್ತಿದೆ. ಇತ್ತೀಚಿನ ಮಾಹಿತಿಯಂತೆ ಗಾಜಾದಲ್ಲಿ ಸಂವಹನಕ್ಕೆ ಅಡ್ಡಿಯುಂಟಾಗಿದ್ದು, ನಿಖರವಾದ ಡೇಟಾ ಸಂಗ್ರಹಣೆಗೆ ತೊಂದರೆಯಾಗಿದೆ ಎಂದು ವರದಿಯು ಹೇಳಿದೆ. ಈ ಅಂಕಿಅಂಶಗಳ ಪರ ನಿಂತಿರುವ ವಿಶ್ವಸಂಸ್ಥೆಯ ಮಾನವೀಯ ವ್ಯವಹಾರಗಳ ಸಮನ್ವಯ ಕಚೇರಿಯ ಮುಖ್ಯಸ್ಥ ಮಾರ್ಟಿನ್ ಗ್ರಿಫಿತ್ಸ್ “ನಾವು ಈ ಅಂಕಿಅಂಶಗಳನ್ನು ಯಾವುದೇ ಆಲೋಚನೆಯಿಲ್ಲದೆ ಎಂದು ಹೇಳಿರುವುದಾಗಿ ಸಿಎನ್ ಎನ್ ವರದಿ ತಿಳಿಸಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top