ಕಡಬ: ಇಲ್ಲಿನ ಒಕ್ಕಲಿಗ ಸೇವಾ ಸಂಘದ ಪದಗ್ರಹಣ ಹಾಗೂ ಸಮುದಾಯ ಭವನದ ಶಿಲಾನ್ಯಾಸ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಿಗ್ಗೆ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರನ್ನು ಬೆಂಗಳೂರಿನ ಬಿಜಿಎಸ್ ಗ್ಲೋಬಲ್ ಹಾಸ್ಪಿಟಲ್ ಮತ್ತು ರೀಸರ್ಚ್ ಸೆಂಟರಿನಲ್ಲಿ ಭೇಟಿ ಮಾಡಲಾಯಿತು.
ಈ ಸಂದರ್ಭ ಕಾರ್ಯಕ್ರಮದ ರೂಪುರೇಷೆ, ತಯಾರಿ ಬಗ್ಗೆ ಮಾಹಿತಿ ಪಡೆದುಕೊಂಡ ಮಹಾಸ್ವಾಮೀಜಿ, ಸಲಹೆ, ಮಾರ್ಗದರ್ಶನ ನೀಡಿದರು.



ಬಳಿಕ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ವಿಪಕ್ಷ ನಾಯಕ ಆರ್. ಅಶೋಕ್, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್, ಮಾಜಿ ಡಿಸಿಎಂ ಡಾ. ಅಶ್ವತ್ಥ ನಾರಾಯಣ್, ಮಡಿಕೇರಿ ಶಾಸಕ ಶ್ರೀಮಂತರ್ ಗೌಡ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಕಾರ್ಯಕ್ರಮದ ಬಗ್ಗೆ ಚರ್ಚಿಸಲಾಯಿತು.