ವಿಶ್ವಕಪ್​ ಟ್ರೋಫಿ ಮೇಲೆ ಕಾಲಿಟ್ಟ ಮಿಚೆಲ್​ ಮಾರ್ಷ್ ವಿರುದ್ಧ ಎಫ್​ಐಆರ್​!

ಉತ್ತರ ಪ್ರದೇಶ: ಏಕದಿನ ವಿಶ್ವಕಪ್​ ಟ್ರೋಫಿ ಮೇಲೆ ಕಾಲಿಟ್ಟು ವಿಶ್ರಾಂತಿ ಪಡೆದಿದ್ದ ಆಸ್ಟ್ರೇಲಿಯಾದ ಮಿಚೆಲ್​ ಮಾರ್ಷ್ ವಿರುದ್ಧ ಭಾರತದಲ್ಲಿ ಎಫ್‌ಐಆರ್ ದಾಖಲಾಗಿದೆ.

ಉತ್ತರ ಪ್ರದೇಶದ ಅಲಿಘರ್‌ನ ಆರ್‌ಟಿಐ ಕಾರ್ಯಕರ್ತ ಪಂಡಿತ್ ಕೇಶವ್ ನೀಡಿದ ದೂರಿನ ಮೇರೆಗೆ ದೆಹಲಿ ಗೇಟ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಾರ್ಷ್​ ಅವರು ವಿಶ್ವಕಪ್‌ ಗೆದ್ದ ಬಳಿಕ ಡ್ರೆಸ್ಸಿಂಗ್​ ರೂಮ್​ನಲ್ಲಿ ಟ್ರೋಫಿ ಮೇಲೆ ತಮ್ಮ ಕಾಲುಗಳನ್ನು ಇಟ್ಟು ವಿಶ್ರಾಂತಿ ಪಡೆಯುವ ಶೈಲಿಯಲ್ಲಿ ಕುಳಿತ ಫೋಟೊವೊಂದು ವೈರಲ್​ ಆಗಿತ್ತು. ಈ ಫೋಟೊ ಕಂಡ ಅನೇಕ ಭಾರತೀಯ ಕ್ರಿಕೆಟ್​ ಅಭಿಮಾನಿಗಳು, ಹಾಲಿ ಮತ್ತು ಮಾಜಿ ಕ್ರಿಕೆಟಿಗರು ಆಕ್ರೋಶ ವ್ಯಕ್ತಪಡಿಸಿದ್ದರು. ಇದೇ ವಿಚಾರವಾಗಿ ಪಂಡಿತ್ ಕೇಶವ್ ಅವರು 140 ಕೋಟಿ ಭಾರತೀಯರ ಭಾವನೆಗಳಿಗೆ ಮಾರ್ಷ್​ ಧಕ್ಕೆ ತಂದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.































 
 

ಈ ಬಾರಿಯ ವಿಶ್ವಕಪ್​ನಲ್ಲಿ ಅತ್ಯಧಿಕ ವಿಕೆಟ್​ ಕಿತ್ತ ಟೀಮ್ ಇಂಡಿಯಾದ ಬೌಲರ್​ ಮೊಹಮ್ಮದ್​ ಶಮಿ ಕೂಡ ಮಾರ್ಷ್ ಅವರ ಈ ಉದ್ದಟತನಕ್ಕೆ ಟೀಕೆ ಮತ್ತು ಬೇಸರ ವ್ಯಕ್ತಪಡಿಸಿದ್ದರು. ನಿಜಕ್ಕೂ ಮಾರ್ಷ್ ಅವರ ಈ ನಡೆ ತುಂಬಾ ನೋವಾಯಿತು ಎಂದಿದ್ದರು. ವಿಶ್ವಕಪ್​ ಪ್ರದರ್ಶನದ ಕುರಿತು ಮಾಧ್ಯಮದವರೊಂದಿಗೆ ಮಾತನಾಡುವ ವೇಳೆ ಶಮಿ ಅವರು ಮಿಚೆಲ್​ ಮಾರ್ಷ್​ ನಡೆಯನ್ನು ಕುಟುವಾಗಿ ಟೀಕಿಸಿದ್ದಾರೆ. “ನನಗೆ ತುಂಬಾ ಬೇಸರವಾಯಿತು. ವಿಶ್ವದ ಎಲ್ಲ ತಂಡಗಳು ಈ ಟ್ರೋಫಿಗಾಗಿ ಹೋರಾಡುತ್ತವೆ. ಗೆದ್ದರೆ ಟ್ರೋಫಿಯನ್ನು ತಲೆಯ ಮೇಲೆ ಹೊತ್ತು ಸಂಭ್ರಮಿಸಲು ಬಯಸುತ್ತಾರೆ. ಹೀಗಿರುವಾಗ ಈ ಪ್ರತಿಷ್ಠಿತ ಟ್ರೋಫಿ ಮೇಲೆ ಕಾಲು ಇಟ್ಟಿದ್ದು, ನನಗೆ ಸಂತೋಷ ನೀಡಲಿಲ್ಲ. ಇದು ಕ್ರಿಕೆಟ್​ಗೆ ಮಾಡಿದ ಅವಮಾನ” ಎಂದು ಶಮಿ ಹೇಳಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top