ರಾಜಧಾನಿಯ ಅರಮನೆ ಮೈದಾನದಲ್ಲಿ ಬೆಂಗಳೂರು ಕಂಬಳ ಸಮಿತಿ ನೇತೃತ್ವದಲ್ಲಿ ಎರಡು ದಿನಗಳ ಕಾಲ ಯಶಸ್ವಿಯಾಗಿ ನಡೆದ ‘ರಾಜ – ಮಹಾರಾಜ’ ಜೋಡುಕರೆ ಕಂಬಳ ಕೂಟ ಸೋಮವಾರ ಮುಂಜಾನೆ ಹೊತ್ತಿಗೆ ವಿದ್ಯುಕ್ತವಾಗಿ ತೆರೆ ಕಂಡಿದೆ. ಕೂಟದಲ್ಲಿ ಒಟ್ಟು 159 ಜೊತೆ ಕೋಣಗಳು ಭಾಗವಹಿಸಿದ್ದವು.
ಕನೆಹಲಗೆ ವಿಭಾಗದಲ್ಲಿ 7 ಜೊತೆ, ಅಡ್ಡಹಲಗೆ ವಿಭಾಗದಲ್ಲಿ 6 ಜೊತೆ, ಹಗ್ಗ ಹಿರಿಯ ವಿಭಾಗದಲ್ಲಿ 21 ಜೊತೆ, ನೇಗಿಲು ಹಿರಿಯ ವಿಭಾಗದಲ್ಲಿ 32 ಜೊತೆ, ಹಗ್ಗ ಕಿರಿಯ ವಿಭಾಗದಲ್ಲಿ 31 ಜೊತೆ ಹಾಗೂ ನೇಗಿಲು ಕಿರಿಯ ವಿಭಾಗದಲ್ಲಿ 62 ಜೊತೆ ಕೋಣಗಳು ಸ್ಪರ್ಧಿಸಿದ್ದವು.
ಸ್ಪರ್ಧೆಗಳ ಫಲಿತಾಂಶದ ವಿವರ ಇಂತಿವೆ.
ಕನೆಹಲಗೆ ವಿಭಾಗ: ಬೊಳ್ಳಂಬಳ್ಳಿ ಶ್ರೀರಾಮ ಚೈತ್ರ ಪರಮೇಶ್ವರ ಭಟ್ “ಬಿ” (6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ). ಹಲಗೆ ಮುಟ್ಟಿದವರು: ಉಲ್ಲೂರು ಕಂದಾವರ ಗಣೇಶ್
ಅಡ್ಡ ಹಲಗೆ ವಿಭಾಗ: ಪ್ರಥಮ: ಎಸ್.ಎಮ್.ಎಸ್ ಫ್ಯಾಮಿಲಿ ಬೆಂಗಳೂರು. ಹಲಗೆ ಮುಟ್ಟಿದವರು: ಭಟ್ಕಳ ಹರೀಶ್.
ದ್ವಿತೀಯ: ಬೋಳಾರ ತ್ರಿಶಾಲ್ ಕೆ ಪೂಜಾರಿ. ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ
ಹಗ್ಗ ಹಿರಿಯ ವಿಭಾಗ: ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ “ಸಿ”. ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ
ದ್ವಿತೀಯ: ಮಾಳ ಆನಂದ ನಿಲಯ ಶೇಖರ ಎ ಶೆಟ್ಟಿ. ಓಡಿಸಿದವರು: ಭಟ್ಕಳ ಶಂಕರ್ ನಾಯ್ಕ್
ಹಗ್ಗ ಕಿರಿಯ ವಿಭಾಗ: ಪ್ರಥಮ: ಸುರತ್ಕಲ್ ಪಾಂಚಜನ್ಯ ಯೋಗೀಶ್ ಕರಿಯ ಪೂಜಾರಿ. ಓಡಿಸಿದವರು: ಮಾಸ್ತಿ ಕಟ್ಟೆ ಸ್ವರೂಪ್
ದ್ವಿತೀಯ: ನಿಟ್ಟೆ ಪರಪ್ಪಾಡಿ ಸುರೇಶ್ ಕೋಟ್ಯಾನ್ “ಎ”. ಓಡಿಸಿದವರು: ಅತ್ತೂರು ಕೋಡಂಗೆ ಸುಧೀರ್ ಸಾಲ್ಯಾನ್
ನೇಗಿಲು ಹಿರಿಯ ವಿಭಾಗ: ಪ್ರಥಮ: ಬಂಗಾಡಿ ಪರಂಬೇಲು ನಾರಾಯಣ ಮಲೆಕುಡಿಯ. ಓಡಿಸಿದವರು: ಸರಪಾಡಿ ಧನಂಜಯ ಗೌಡ
ದ್ವಿತೀಯ: ಮಾಳ ಆನಂದ ನಿಲಯ ಶೇಖರ ಎ ಶೆಟ್ಟಿ. ಓಡಿಸಿದವರು: ಪಟ್ಟೆ ಗುರು ಚರಣ್
ನೇಗಿಲು ಕಿರಿಯ ವಿಭಾಗ: ಪ್ರಥಮ: ಜೈ ತುಳುನಾಡು ಪುತ್ತೂರು ಬೊಟ್ಯಾಡಿ ಕಿಶೋರ್ ಭಂಡಾರಿ. ಓಡಿಸಿದವರು: ಪೆಂರ್ಗಾಲು ಕೃತಿಕ್ ಗೌಡ
ದ್ವಿತೀಯ: ಎರ್ಮಾಳ್ ಪುಚ್ಚೊಟ್ಟುಬೀಡು ಬಾಲಚಂದ್ರ ಶೆಟ್ಟಿ. ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ
ಗೆದ್ದವರಿಗೆ ಬಹುಮಾನ ಹೀಗಿತ್ತು?
ಈ ಕೂಟದಲ್ಲಿ ಪ್ರಥಮ ಪ್ರಶಸ್ತಿ ಗೆದ್ದವರಿಗೆ 16 ಪವನ್ ಚಿನ್ನ ಮತ್ತು 1 ಲಕ್ಷ ರೂ. ನಗದು ಬಹುಮಾನ ನೀಡಲಾಗಿದೆ. ದ್ವಿತೀಯ ಪ್ರಶಸ್ತಿ ಗೆದ್ದವರಿಗೆ 8 ಪವನ್ ಚಿನ್ನ ಮತ್ತು 50 ಸಾವಿರ ರೂ. ಬಹುಮಾನ ನೀಡಲಾಗಿದೆ. ಮೂರನೇ ಬಹುಮಾನವಾಗಿ 4 ಪವನ್ ಚಿನ್ನ ಮತ್ತು 25 ಸಾವಿರ ರೂ. ನೀಡಲಾಯಿತು.