ಸುಬ್ರಹ್ಮಣ್ಯ: ಕಾರ್ತಿಕ ಹುಣ್ಣಿಮೆ ದಿನ ಕುಲ್ಕುಂದ ಜಾನುವಾರು ಜಾತ್ರೆಯ ಪ್ರಯುಕ್ತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಹಕಾರದೊಂದಿಗೆ ಕುಲ್ಕುಂದ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಗೋ ಪೂಜೆ ಸಾಂಕೇತಿಕವಾಗಿ ನಡೆಯಿತು.

ದೇವಸ್ಥಾನದ ಅರ್ಚಕರು ವಿಧಿ ವಿಧಾನದೊಂದಿಗೆ ಗೋಪೂಜೆ ನೆರವೇರಿಸಿದರು.
ಬಸವೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಗಿರಿಧರ ಸ್ಕಂದ, ಬಸವೇಶ್ವರ ದೇವಸ್ಥಾನದ ಅರ್ಚಕ ಗಣೇಶ್ ದೀಕ್ಷಿತ್, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ, ವ್ಯವಸ್ಥಾಪನ ಸಮಿತಿ ಸದಸ್ಯ ವನಜ ಭಟ್, ಶೋಭಾ ಗಿರಿಧರ, ಮನೋಜ್, ಶ್ರೀಕುಮಾರ್, ರವಿ ಶೆಟ್ಟಿ ಕುಲಕುಂದ, ರಾಜೇಶ್ ಕುಲ್ಕುಂದ, ಬಸವೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಕಾರ್ಯದರ್ಶಿ ಚಂದ್ರ ಶೇಖರ, ಕಿರಣ್ ಟೈಲರ್, ಲೋಕೇಶ್, ಗಿರೀಶ್ ಆಚಾರ್ಯ, ಗುಡ್ಡಪ್ಪ ಗೌಡ, ವಿಕಾಸ್, ಆಡಳಿತ ಮಂಡಳಿಯ ಸದಸ್ಯರು, ಊರಿನವರು ಭಕ್ತಾದಿಗಳು ಉಪಸ್ಥಿತರಿದ್ದರು.