ಐವರ ಸಾಮೂಹಿಕ ಆತ್ಮಹತ್ಯೆಯ ಹಿಂದೆ ಬಡ್ಡಿ ದಂಧೆಯ ನೆರಳು!! | “ಇವರ ಕಾಟಕ್ಕೆ ನಮ್ಮ ಪ್ರಾಣ ಕೊಟ್ಟಿದ್ದೇವೆ”- ಡೆತ್ ನೋಟ್’ನಲ್ಲಿವೆ ಇನ್ನೂ ಹಲವು ವಿಚಾರಗಳು!!

ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣಾದ ಘಟನೆ ಭಾನುವಾರ ತುಮಕೂರಿನ ಸದಾಶಿವ ನಗರದಲ್ಲಿ ನಡೆದಿದ್ದು, ಇದೀಗ ಆತ್ಮಹತ್ಯೆಯ ಹಿಂದಿನ ಒಂದೊಂದೇ ಘಟನೆಗಳು ಹೊರಬರುತ್ತಿದೆ. ಅಲ್ಲದೇ, ಆತ್ಮಹತ್ಯೆಯ ಹಿಂದೆ ಬಡ್ಡಿ ದಂಧೆಯ ಕರಾಳತೆಯೂ ಇದೆ ಎಂಬ ಅನುಮಾನಗಳು ಮೂಡಿವೆ.

ಗರೀಬ್ ಸಾಬ್, ಸುಮಯ್ಯ, ಹಾಜಿರಾ, ಮೊಹಮ್ಮದ್ ಸುಭಾನ್, ಮೊಹಮ್ಮದ್ ಮುನೀರ್ ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದು ಬಂದಿದೆ.

ಸಾವಿಗೂ ಮುನ್ನ ಗರೀಬ್ ಸಾಬ್ ಅವರು ತನ್ನ ದೊಡ್ಡಮ್ಮನಿಗೆ ಡೆತ್ ನೋಟ್ ಬರೆದಿದ್ದಾರೆ‌. ದೊಡ್ಡಮ್ಮನಿಗೆ ನಮಸ್ಕಾರಗಳು. ನಮಗೆ ಸಾಲ ಹೆಚ್ಚಾಗಿದೆ. ವ್ಯಾಪಾರದಲ್ಲಿ ಲಾಭ ಇಲ್ಲ. ಕೆಲಸಕ್ಕೆ ಹೋದರೆ ಹಣ ಬರ್ತಿಲ್ಲ. ಹೀಗಾಗಿ ಸಂಸಾರ ಮಾಡೋದು ಕಷ್ಟವಾಗಿದೆ. ಊಟ ಮಾಡೋಕು ಕಷ್ಟ ಆಗಿದೆ. ಊರಲ್ಲಿದ್ದಾಗ ಹೆಂಡತಿಯ ಅಣ್ಣ ಸಾದಿಕ್, ಹೆಂಡತಿಯ ತಂಗಿ ಯಾಸಿನ್ ನಮ್ಮ ಮೇಲೆ ವಿಷ ಕಾರಿದ್ದರು. ಅದಕ್ಕೆ ನಾವು ಇಲ್ಲಿಗೆ ಬಂದಿದ್ದೇವೆ. ಇಲ್ಲಿ ಸಾಲ ಕಟ್ಟೋದು ಹೆಚ್ಚಾಗಿದೆ. ಬಾಡಿಗೆ ಮನೆಗೆ ನಲವತ್ತೈದು ಸಾವಿರ ಅಡ್ವಾನ್ಸ್ ಕೊಟ್ಟಿದ್ದೀವಿ. ಮೂರು ತಿಂಗಳ ಬಾಡಿಗೆ ಕೊಡೋದು ಬಾಕಿಯಿದೆ.































 
 

ಉಳಿದ ಹಣವನ್ನು ನಮ್ಮ ದೊಡ್ಡಮ್ಮನಿಗೆ ವಾಪಾಸು ಕೊಡಿ. ಮನೆ ವಸ್ತುಗಳನ್ನು ನೀವು ತಗೋಳಿ. ಹದಿನೈದು ಸಾವಿರ ಹಣವನ್ನು ಜರಿನಾ ಆಂಟಿಗೆ ಕೊಡಿ. ನಮ್ಮ ಬೈಕನ್ನು ನಮ್ಮ ಹಿರಿಯಣ್ಣ ಅಜಾಜ್’ಗೆ ಕೊಡಿ. ಅತ್ತಿಗೆ ಪರ್ವೀನ್ ಮತ್ತು ಅಣ್ಣನಿಗೆ ಫೋನ್ ಕೊಡಿ. ದೊಡ್ಡಮ್ಮ ನೀವು ಬೇಕಾದ ವಸ್ತುಗಳನ್ನು ಇಟ್ಟುಕೊಳ್ಳಬಹುದು ಅಥವಾ ಮಾರಿಕೊಳ್ಳಬಹುದು. ತುಂಬಾ ವಿಷಯ ಇದೆ. ಆದ್ರೆ ಇದರಲ್ಲಿ ಬರೆಯೋಕಾಗಲ್ಲ. ಈ ಪತ್ರವನ್ನು ಪೊಲೀಸರಿಗೆ ತೋರಿಸಿ ಎಂದು ಬರೆಯಲಾಗಿದೆ.

ಮತ್ತರ್ ಮಾಮನಿಗೆ ಕೊನೆಯ ನಮಸ್ಕಾರಗಳು. ನಮಗೆ ಊಟಕ್ಕೆ ಅಕ್ಕಿ ಕೊಟ್ಟಿದ್ದೀರಾ, ಅದಕ್ಕೆ ನಿಮಗೆ ಮೆಳೇಕೋಟೆಯಲ್ಲಿರೋ ಅಂಗಡಿಯಲ್ಲಿರೋ ಸಾಮಾನುಗಳು ಮತ್ತೆ ಅದರಲ್ಲಿ ಐದು ಸಾವಿರ ರೂ. ಇಟ್ಟಿದ್ದೀವಿ. ಒಂದು ತಿಂಗಳು ಬಾಡಿಗೆ 2000 ರೂ. ಕೊಡಬೇಕು. ಸದಾಶಿವನಗರದ ಮೂರನೇ ಬಿ ಮುಖ್ಯರಸ್ತೆಯಲ್ಲಿರುವ ನಾವು ವಾಸಿಸುವ ಮನೆಯ ಕೆಳಗಿನವರು ನಮಗೆ ತುಂಬಾ ಕಾಟ ಕೊಟ್ಟಿದ್ದಾರೆ.

ನಮಗೆ ಯಾರಾದರೂ ಸಹಾಯ ಮಾಡಿದರೆ ಅವರಿಗೆ ಇಲ್ಲಸಲ್ಲದನ್ನು ಹೇಳ್ತಿದ್ದರು. ನಾವು ಅವರು ಹೇಳಿದಂತೆ ಕೇಳಬೇಕಿತ್ತು. ಇಲ್ಲವಾದರೆ ಅವರು ನಮ್ಮ ಜತೆ ಜಗಳ ಮಾಡುತಿದ್ದರು. ಶಬಾನಾ ನಮಗೆ ಏಳು ತಿಂಗಳ ಹಣ ಕೊಟ್ಟಿರಲಿಲ್ಲ. ಹಣ ಕೇಳಿದ್ದಕ್ಕೆ ನಮ್ಮ ಮೇಲೆ ವಿಷ ಕಾರುತ್ತಿದ್ದಾಳೆ. ನಮ್ಮ ಸಾವಿಗೆ ಐದು ಜನರೇ ಕಾರಣ. ನಮ್ಮ ಮನೆಯ ಕೆಳಗಿನ ಖಲಂದರ್, ಅವನ ಮಗಳು ಸಾನಿಯಾ, ಅವನ ಹಿರಿಯ ಮಗ, ಮಹಡಿ ಮನೆಯ ಶಬಾನಾ, ಮತ್ತು ಅವಳ ಮಗಳು ಸಾನಿಯಾ ಈ ಎಲ್ಲರೂ ನಮ್ಮ ಸಾವಿಗೆ ಕಾರಣ ಎಂದು ಬರೆಯಲಾಗಿದೆ. ನಮ್ಮ ಸಾವಿಗೆ ಗೃಹ ಮಂತ್ರಿ ಸರ್ ಕಾನೂನು ರೀತಿ ಶಿಕ್ಷೆ ಕೊಡಬೇಕು ಎಂದು ಬೇಡಿಕೊಳ್ತೀನಿ. ಇವರ ಕಾಟಕ್ಕೆ ನಮ್ಮ ಪ್ರಾಣ ಕೊಟ್ಟಿದ್ದೇವೆ. ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಕೈ ಮುಗಿದು ಕೇಳಿಕೊಳ್ಳುತ್ತೇವೆ. ನಮ್ಮ ದೇಹವನ್ನು ಪೋಸ್ಟ್ ಮಾರ್ಟಮ್ ಮಾಡಬೇಕು. ಇನ್ನೂ ವಿಷಯ ಫೋನ್ ನಲ್ಲಿದೆ. ಇಂತಿ ನಿಮ್ಮ ಗರೀಬ್ ಸಾಬ್, ಸುಮಯ್ಯ, ಹಾಜಿರಾ, ಮೊಹಮ್ಮದ್ ಸುಭಾನ್, ಮೊಹಮ್ಮದ್ ಮುನೀರ್ ಎಂದು ಬರೆಯಲಾಗಿದೆ.

ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top