ಪುತ್ತೂರು: ಮಹಿಳೆಗೆ ಮದ್ಯ ಕುಡಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ ಘಟನೆಗೆ ಸಂಬಂಧಿಸಿ ಆರೋಪಿಯೊಬ್ಬನ್ನು ನಗರ ಪೊಲೀಸರು ಬಂಧಿಸಿದ್ದಾರೆ.
ಆರ್ಯಾಪು ಗ್ರಾಮದ ಸಂಶುದ್ದೀನ್ (23) ಬಂಧಿತ ವ್ಯಕ್ತಿ ಎನ್ನಲಾಗಿದೆ.
ನ.24 ರಂದು ರಾತ್ರಿ ಸಮಯ ಹಾಸನ ತಾಲೂಕು ಚೆನ್ನರಾಯಪಟ್ಟಣದ ನಿವಾಸಿ ಸಂತ್ರಸ್ಥ ಮಹಿಳೆ ಪುತ್ತೂರಿನ ಬಸ್ ನಿಲ್ದಾಣದ ಬಳಿ ನಿಂತಿದ್ದ ವೇಳೆ ಅಲ್ಲಿಗೆ ಬಂದ ಆರೋಪಿ ಮಹಿಳೆಯೊಂದಿಗೆ ಮಾತನಾಡಿ ಆಕೆಯ ಜೊತೆಗೆ ಸಲುಗೆ ಬಳಸಿಕೊಂಡು ನಂತರ ಮದ್ಯ ಕುಡಿಸಿದ್ದಾನೆ. ಬಳಿಕ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಾನೆ ಎಂದು ಪುತ್ತೂರು ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಪುತ್ತೂರು ಸರಕಾರಿ ಬಸ್ ನಿಲ್ದಾಣದ ಬಳಿ ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ತಿಳಿದು ಬಂದಿದೆ.