ಸುಬ್ರಹ್ಮಣ್ಯ: ಬೆಂಗಳೂರಿನ ಮಹಿಳೆಯೊಬ್ಬರು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಬಂದಿದ್ದ ಸಂದರ್ಭ ಹೃದಯಾತಕ್ಕೊಳಗಾಗಿ ಮೃತಪಟ್ಟ ಘಟನೆ ನಡೆದಿದೆ.
ಬೆಂಗಳೂರಿನ ಎಂವಿ ಗಾರ್ಡನ್ ನಿವಾಸಿ ಶಿವಕುಮಾರ್ ಅವರ ಪತ್ನಿ ಲಕ್ಷ್ಮೀ (32) ಮೃತಪಟ್ಟವರು.
ಶಿವಕುಮಾರ್ ಅವರು ಪತ್ನಿ, ಮಕ್ಕಳೊಂದಿಗೆ ಸಕಲೇಶಪುರದಲ್ಲಿ ನಡೆದ ಮದುವೆ ಕಾರ್ಯಕ್ರಮಕ್ಕೆ ಬಂದಿದ್ದರು. ಈ ವೇಳೆ ಲಕ್ಷ್ಮೀ ಹಾಗೂ ಮಕ್ಕಳು ಸಂಬಂಧಿಕರ ಜತೆ ಧರ್ಮಸ್ಥಳಕ್ಕೆ ತೆರಳಿ ಸುಬ್ರಹ್ಮಣ್ಯಕ್ಕೆ ಬಂದಿದ್ದರು. ರಾತ್ರಿ ಲಕ್ಷ್ಮೀ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಕಡಬ ಸರಕಾರಿ ಆಸ್ಪತ್ರೆಗೆ ಕರೆತಂದು, ಬಳಿಕ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರದೊಯ್ಯಲಾಯಿತು. ಅಲ್ಲಿ ವೈದ್ಯರು ಪರೀಕ್ಷಿಸಿ ಮಹಿಳೆ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.