ಬರೆಪ್ಪಾಡಿ: ಬರೆಪ್ಪಾಡಿ ಶ್ರೀ ಕೇಪುಳೇಶ್ವರ ಪಂಚಲಿಂಗೇಶ್ವರ ದೇವಸ್ಥಾನದ ಸುತ್ತುಪೌಳಿಗೆ ಶಿಲಾನ್ಯಾಸ ಕಾರ್ಯಕ್ರಮ ಶುಕ್ರವಾರ ನಡೆಯಿತು.
ಸಂಸದ ನಳಿನ್ ಕುಮಾರ್ ಕಟೀಲ್ ಶಿಲಾನ್ಯಾಸ ನೆರವೇರಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ, ಮಾಜಿ ಸಚಿವ ಎಸ್.ಅಂಗಾರ, ಶಿಲ್ಪಿ ಪ್ರಸಾದ್ ಮುನಿಯಂಗಳ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಚ ವಿಠಲ ಗೌಡ ಬರೆಪ್ಪಾಡಿ, ಎಪಿಎಂಸಿ ನಿಕಟಪೂರ್ವ ಅಧ್ಯಕ್ಷ ದಿನೇಶ್ ಮೆದು, ಕಾಣಿಯೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಗಣೇಶ್ ಉದನಡ್ಕ, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಗಿರಿಶಂಕರ ಸುಲಾಯ, ಬೆಳಂದೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ನಿರ್ಮಲ ಕೇಶವ ಗೌಡ, ಬೆಳಂದೂರು ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಲೋಹಿತ್ ಕೆಡೆಂಜಿಕಟ್ಟ, ಒಕ್ಕಲಿಗ ಸಮುದಾಯ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ಪ್ರವೀಣ್ ಕುಂಟ್ಯಾನ, ಅನುವಂಶಿಕ ಮೊಕ್ತೇಸರ ಜಿನೇಶ್ ಭಟ್, ರಾಕೇಶ್ ರೈ ಕೆಡೆಂಜಿ, ಇಂಜಿನಿಯರ್ ಜಿತೇಶ್, ವ್ಯವಸ್ಥಾಪನಾ ಸಮಿತಿ ಸದಸ್ಯರು, ಜೀರ್ಣೋದ್ಧಾರ ಸಮಿತಿ ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.