ರಸ್ತೆಗಡ್ಡವಾಗಿ ಉರುಳಿಬಿದ್ದ ಕೋಳಿ ಸಾಗಾಟದ ಲಾರಿ!!

ಕೋಳಿ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಉರುಳಿಬಿದ್ದ ಘಟನೆ ವಿಟ್ಲ-ಸಾಲೆತ್ತೂರು ರಸ್ತೆಯ ರಾಧಾಕಟ್ಟೆ ಎಂಬಲ್ಲಿ ಶುಕ್ರವಾರ ನಡೆದಿದೆ.

ವಿಟ್ಲ ಕಡೆಯಿಂದ ಸಾಲೆತ್ತೂರಿನತ್ತ ತೆರಳುತ್ತಿದ್ದ ಕೋಳಿ ಸಾಗಾಟದ ಈ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಅಡ್ಡವಾಗಿ ಉರುಳಿಬಿದ್ದಿದೆ. ಘಟನೆಯಲ್ಲಿ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ

ರಸ್ತೆಗೆ ಉರುಳಿ ಬಿದ್ದಿದ್ದ ಕೋಳಿಗಳಿದ್ದ ಬಾಕ್ಸ್ ಗಳನ್ನು ಬಳಿಕ ಬೇರೆ ವಾಹನದಲ್ಲಿ ತುಂಬಿಸಿ ಕೊಂಡೊಯ್ಯಲಾಯಿತು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top