ಅಡಿಕೆ ಬೆಳೆಗೆ ತಗುಲಿರುವ ಎಲೆಚುಕ್ಕಿ ರೋಗಕ್ಕೆ ವಿಜ್ಞಾನಿಗಳನ್ನು ಕಳುಹಿಸಿ ಸಂಶೋಧನೆ ಮಾಡಿಸಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.
ತೀರ್ಥಹಳ್ಳಿ ತಾಲೂಕುಗಳ ಬರಗಾಲ ಮತ್ತು ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಅಡಿಕೆಗೆ ತಗುಲಿರುವ ಎಲೆಚುಕ್ಕಿ ರೋಗದ ಬಗ್ಗೆ ಶಾಸಕ ಆರಗ ಜ್ಞಾನೇಂದ್ರ ಪ್ರಸ್ತಾಪಿಸಿದರು. ಪ್ರತಿಕ್ರಿಯಿಸಿದ ಮಧು ಬಂಗಾರಪ್ಪ, ಎಲೆಚುಕ್ಕಿ ರೋಗ ಈಗಾಗಲೇ ವ್ಯಾಪಕವಾಗಿ ಹರಡಿದೆ. ರೈತರ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಇದರ ಬಗ್ಗೆ ಸಂಶೋಧನೆ ನಡೆಸಿದ ಬಳಿಕವಷ್ಟೇ ಸೂಕ್ತ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದರು.
ಅಂತರ್ಜಲ ಮಟ್ಟ ಈಗ ತುಂಬಾ ಕುಸಿತ ಕಂಡಿದೆ. ಶೇ. 6ರಷ್ಟಿದ್ದ ಮಟ್ಟ ಇದೀಗ ಶೇ. 15ಕ್ಕೆ ಇಳಿಕೆಯಾಗಿದೆ ಎಂದು ಸಭೆಗೆ ತಿಳಿಸಿದರು.