ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಮಂಗಳೂರು ಕ್ಷೇತ್ರ ಸಂಪನ್ಮೂಲ ಕೇಂದ್ರ ಹಾಗೂ ಮಂಗಳೂರು ರಾಮಕೃಷ್ಣ ಆಂಗ್ಲ ಮಾಧ್ಯಮ ಶಾಲೆ ಸಂಯುಕ್ತ ಆಶ್ರಯದಲ್ಲಿ ಮಂಗಳೂರು ರಾಮಕೃಷ್ಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಹಲವು ಪ್ರಶಸ್ತಿ ಪಡೆದುಕೊಂಡಿದ್ದಾರೆ.
ಪ್ರೌಢ ಶಾಲಾ ವಿಭಾಗದಲ್ಲಿ 8ನೇ ತರಗತಿಯ ಕುಮಾರಿ ಸುಪ್ರಜಾ ರಾವ್ ಜನಪದ ಗೀತೆಯಲ್ಲಿ ದ್ವಿತೀಯ, ಹಿರಿಯ ಪ್ರಾಥಮಿಕ ವಿಭಾಗದಲ್ಲಿ 7ನೇ ತರಗತಿಯ ನಾಗಾಭೂಷಣ ಕಿಣಿ ಸಂಸ್ಕೃತ ಧಾರ್ಮಿಕ ಪಠಣದಲ್ಲಿ ಪ್ರಥಮ, 7ನೇ ತರಗತಿಯ ಸಿರಿ ಹಿಳ್ಳೆಮನೆ ಭಕ್ತಿಗೀತೆಯಲ್ಲಿ ಪ್ರಥಮ, 7ನೇ ತರಗತಿಯ ಅವನಿ.ಎಸ್.ವಿ. ಲಘು ಸಂಗೀತದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.
ವಿದ್ಯಾರ್ಥಿಗಳ ಸಾಧನೆಯನ್ನು ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಶಿಕ್ಷಕರು, ಸಿಬ್ಬಂದಿ ವರ್ಗ ಅಭಿನಂದಿಸಿದೆ.