ಡಿ.27: ನಗರಸಭೆಯ ತೆರವಾದ ಎರಡು ವಾರ್ಡ್‍ಗಳಿಗೆ ಉಪಚುನಾವಣೆ

ಪುತ್ತೂರು : ನಗರಸಭಾ ಸದಸ್ಯರ ಅಕಾಲಿಕ ಮರಣದಿಂದಾಗಿ ಸ್ಥಳೀಯ ಸಂಸ್ಥೆಗಳ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಿಗದಿಯಾಗಿದ್ದು, ಎರಡು ಸ್ಥಾನಗಳಿಗೆ ಡಿ.27 ರಂದು ಮತದಾನ ನಿಗದಿಗೊಳಿಸಿ ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ಆದೇಶಿಸಿದ್ದಾರೆ.

ನಗರ ಸಭೆಯ ವಾರ್ಡ್ 1 ರಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶಿವರಾಮ ಸಪಲ್ಯ ಹಾಗೂ ವಾರ್ಡ್ 11ರಲ್ಲಿ ಕಾಂಗ್ರೆಸ್‌ ಬೆಂಬಲಿತ ಸದಸ್ಯ ಶಕ್ತಿ ಸಿನ್ಹಾರವರ ನಿಧನದಿಂದ ತೆರವಾದ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಡಿ.8 ರಂದು ಜಿಲ್ಲಾಧಿಕಾರಿಗಳು ಅಧಿಸೂಚನೆ ಪ್ರಕಟಗೊಳಿಸಲಿದ್ದು, , ಅದೇ ದಿನ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭಗೊಳ್ಳಲಿದೆ. ಡಿ.15 ರಂದು ನಾಮಪತ್ರ ಸಲ್ಲಿಸಲು ಅಂತಿಮ ದಿನ, ಡಿ.16 ನಾಮಪತ್ರ ಪರಿಶೀಲನೆ, ಡಿ.18 ನಾಮಪತ್ರ ಹಿಂಪಡೆಯಲು ಅಂತಿಮ ದಿನ, ಡಿ.27 ಮತದಾನ, ಡಿ.30 ಮತ ಎಣಿಕೆ ಕಾರ್ಯ ನಡೆಯಲಿದೆ.































 
 

ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯ ತನಕ ಮತದಾನ ನಡೆಯಲಿದೆ. ಅವಶ್ಯವಿದ್ದರೆ ಡಿ.29ರಂದು ಮರುಮತದಾನ ನಡೆದು ಡಿ.30 ರಂದು ಬೆಳಿಗ್ಗೆ 8 ಗಂಟೆಯಿಂದ ಮತ ಪ್ರಕ್ರಿಯೆ ನಡೆದು ಫಲಿತಾಂಶ ಘೋಷಣೆಯಾಗಲಿದೆ.

ಚುನಾವಣೆ ಹಿನ್ನಲೆಯಲ್ಲಿ ನಗರ ಸಭಾ ವ್ಯಾಪ್ತಿ ಹಾಗೂ ಉಪ ಚುನಾವಣೆ ನಡೆಯುವ ವಾರ್ಡ್ ಗಳ ವ್ಯಾಪ್ತಿಯಲ್ಲಿ ನೀತಿ ಸಂಹಿತೆಯು ಡಿ.8 ರಿಂದ 30 ರ ತನಕ ಜಾರಿಯಲ್ಲಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top