ಪುತ್ತೂರು: ಅಧ್ಯಾಪನ ವೃತ್ತಿಯಲ್ಲಿ ಸರಳ ಸಜ್ಜನಿಕೆಯಿಂದ ಕೂಡಿದಾಗ ವಿದ್ಯಾರ್ಥಿಗಳನ್ನು ಅರಿತುಕೊಳ್ಳಲು ಸುಲಭ ಸಾಧ್ಯ. ಇದಕ್ಕೆ ಉತ್ತಮ ಉದಾಹರಣೆಯಾಗಿ ನಿವೃತ್ತಿಯಾಗುತ್ತಿರುವ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಎನ್ ನರಸಿಂಹ ಭಟ್ ಹಾಗೂ ಕಛೇರಿ ನಿರ್ವಾಹಕ ಜಗನ್ನಾಥ್ ನಾಯಕ್ ಸಾಕ್ಷಿಯಾಗಿದ್ದಾರೆ ಎಂದು ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಡಾ. ಶ್ರೀಪತಿ ಕಲ್ಲೂರಾಯ ಹೇಳಿದರು.
ಪುತ್ತೂರು ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ)ಮಹಾವಿದ್ಯಾಲಯದ ಅಧ್ಯಾಪಕ ಹಾಗೂ ಅಧ್ಯಾಪಕೇತರ ನೌಕರರ ಸಂಘದಿಂದ ಆಯೋಜಿಸಿದ ನಿವೃತ್ತರಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು.
ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಮುರಳಿಕೃಷ್ಣ ಕೆ.ಎನ್ ಮಾತನಾಡಿ, ನಿವೃತ್ತರಾಗುತ್ತಿರುವ ಹಿರಿಯರು ಪ್ರಸ್ತುತ ದಿನದ ಉದ್ಯೋಗಿಗಳಿಗೆ ಮಾರ್ಗದರ್ಶಕರು. ಅವರ ಸರಳತೆ, ಶಿಸ್ತು, ಸಮಯಪ್ರಜ್ಞೆ, ಕಾರ್ಯದಕ್ಷತೆಯನ್ನು ಪ್ರತಿಯೊಬ್ಬರು ಮೆಚ್ಚುವ ಹಾಗೂ ರೂಢಿಸಿಕೊಳ್ಳುವ ವಿಷಯ ಎಂದರು.
ನಿವೃತ್ತಿಗೊಳ್ಳುತ್ತಿರುವ ಕಾಲೇಜಿನ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಎನ್ ನರಸಿಂಹ ಭಟ್ ಹಾಗೂ ಕಾಲೇಜಿನ ಅಧ್ಯಾಪಕೇತರ ಸಿಬ್ಬಂದಿ ಜಗನ್ನಾಥ್ ನಾಯಕ್ ಅವರನ್ನು ಸನ್ಮಾನಿಸಲಾಯಿತು.
ವಿಶ್ರಾಂತ ಪ್ರಾಂಶುಪಾಲರಾದ ಪ್ರೊ.ವೇದವ್ಯಾಸ, ಡಾ. ಮಾಧವ್ ಭಟ್, ಪ್ರಾಂಶುಪಾಲ ಪ್ರೊ. ವಿ. ಗಣಪತಿ ಭಟ್, ಕಾಲೇಜಿನ ಪರೀಕ್ಷಾಂಗ ಕುಲ ಸಚಿವ ಡಾ. ಎಚ್.ಜಿ. ಶ್ರೀಧರ್, ಕಾಲೇಜಿನ ವಿಶೇಷ ಅಧಿಕಾರಿ ಡಾ. ಶ್ರೀಧರ್ ನಾಯಕ್, ಐಕ್ಯೂ ಎಸಿ ಸಂಯೋಜಕ ಪ್ರೊ. ಶಿವಪ್ರಸಾದ್ ಎಸ್., ಅಧ್ಯಾಪಕ ಸಂಘದ ಸಂಯೋಜಕ ಡಾ.ಸೌಮಿತ್ರ, ಪದವಿಪೂರ್ವ ಕಾಲೇಜಿನ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಹರೀಶ್ ಶಾಸ್ತ್ರಿ, ಕಾಲೇಜಿನ ಅಧ್ಯಾಪಕ ವೃಂದ, ಅಧ್ಯಾಪಕೇತರ ನೌಕರರ ವೃಂದ ಉಪಸ್ಥಿತರಿದ್ದರು. ಭೌತಶಾಸ್ತ್ರ ವಿಭಾಗದ ಉಪನ್ಯಾಸಕ ದೀಕ್ಷಿತ್ ಕಾರ್ಯಕ್ರಮ ನಿರ್ವಹಿಸಿದರು.