ಶಿರಾಡಿ: ಇಲ್ಲಿನ ಕೆಂಪುಹೊಳೆ ಸಮೀಪ ಮಿನಿ ಲಾರಿಯೊಂದಕ್ಕೆ ವಾಹನವೊಂದು ಡಿಕ್ಕಿ ಹೊಡೆದು, ಪರಾರಿಯಾಗಿರುವ ಘಟನೆ ಸಂಭವಿಸಿದೆ.
ಮಿನಿಲಾರಿಯಲ್ಲಿದ್ದ ಚಾಲಕ ಸಹಿತ ಇಬ್ಬರು ಮೃತಪಟ್ಟಿದ್ದಾರೆ. ಮಿನಿ ಲಾರಿ ಸಂಪೂರ್ಣ ನಜ್ಜುಗುಜ್ಜಾಗಿದೆ.

ಡಿಕ್ಕಿ ಹೊಡೆದಿರುವ ವಾಹನವನ್ನು ಘನ ವಾಹನವಾಗಿರಬಹುದೆಂದು ಶಂಕಿಸಲಾಗಿದೆ. ಹಾಸನ ಭಾಗದಿಂದ ಮಂಗಳೂರಿಗೆ ಬರುತ್ತಿದ್ದ ಮಿನಿಲಾರಿಗೆ ಘನ ವಾಹನ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ. ಸಕಲೇಶಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.