ಪುತ್ತೂರು: ಕಾರು ಮತ್ತು ಈಚರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಕಬಕ ಅಡ್ಯಲಾಯ ದೈವಸ್ಥಾನದ ಎದುರಿನಲ್ಲಿ ನಡೆದಿದೆ.
ಕಾರಿನಲ್ಲಿದ್ದವರು ಮಣಿಪಾಲ ಮೂಲದವರು ಎನ್ನಲಾಗಿದೆ. ಈಚರ್ ಲಾರಿ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಿದ್ದಾರೆ.

























