ಪುತ್ತೂರು: ಬಾಲ್ಯದಿಂದಲೇ ಕ್ರೀಡಾ ಮನೋಭಾವ ಮೂಡಿಸಿಕೊಂಡು ಸದೃಢ ಶರೀರ ಬೆಳೆಸಿಕೊಳ್ಳುವುದು ಮಗುವಿನ ಶಾರೀರಿಕ ಹಾಗೂ ಮಾನಸಿಕ ಬೆಳವಣಿಗೆಗೆ ಪೂರಕ ಎಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಹರಿಣಾಕ್ಷಿ. ಜೆ. ಶೆಟ್ಟಿ ಹೇಳಿದರು.

ಅವರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚಿಣ್ಣರ ಕ್ರೀಡೋತ್ಸವ-2023-24 ಉದ್ಘಾಟಿಸಿ ಮಾತನಾಡಿ, ಇಂತಹ ಚಟುವಟಿಕೆಗಳಿಂದ ಮಗುವಿನ ನೈಜ ಪ್ರತಿಭೆ ಬೆಳಕಿಗೆ ಬರುತ್ತದೆ ಎಂದು ಹೇಳಿದರು.
ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಡಾ. ಶಿವಪ್ರಕಾಶ್ ಎಂ. ಅಧ್ಯಕ್ಷತೆ ವಹಿಸಿದ್ದರು. ಸದಸ್ಯೆ ಮಾಲಾ ಮಹೇಶ್ ಶುಭ ಹಾರೈಸಿದರು. ಸಹಶಿಕ್ಷಕಿ ವಿದ್ಯಾ ಸರಸ್ವತಿ ಸ್ವಾಗತಿಸಿ, ಕವಿತಾ ಸತೀಶ್ ವಂದಿಸಿದರು. ಸಹನಾ ಪೈ ಕಾರ್ಯಕ್ರಮ ನಿರೂಪಿಸಿದರು.
ಬಳಿಕ ಶಾಲಾ ಮುಖ್ಯ ಶಿಕ್ಷಕರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಸಹಶಿಕ್ಷಕರ ಸಹಕಾರದಲ್ಲಿ ಪೂರ್ವ ಪ್ರಾಥಮಿಕದಿಂದ 4ನೇ ತರಗತಿ ವರೆಗಿನ ಮಕ್ಕಳಿಂದ ಆಕರ್ಷಕ ಪಥಸಂಚಲನ ನಡೆಯಿತು. ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ಶಾಲಾ ಆಡಳಿತ ಮಂಡಳಿ ಸದಸ್ಯರು ಮತ್ತು ಪೋಷಕ ಬಂಧುಗಳು ಉಪಸ್ಥಿತರಿದ್ದರು.