ಮೂಡಬಿದ್ರೆ: ಮೂರು ದಿನಗಳ ಹಿಂದೆ ವಿದೇಶದಿಂದ ಊರಿಗೆ ಬಂದಿದ್ದ ಯುವಕನ ಬೈಕ್ ಅಪಘಾತದಲ್ಲಿ ಮೃತಪಟ್ಟ ಘಟನೆ ಮೂಡಬಿದ್ರೆ ಠಾಣಾ ವ್ಯಾಪ್ತಿಯ ಕಲ್ಲಬೆಟ್ಟುವಿನಲ್ಲಿ ನಡೆದಿದೆ.
ಮೂಡಬಿದ್ರೆ ಮಹಾವೀರ ಕಾಲೇಜು ಬಳಿ ನಿವಾಸಿ ಪ್ರದೀಪ್ ಶೆಟ್ಟಿ (38) ಮೃತಪಟ್ಟ ಯುವಕ.
ಪ್ರದೀಪ್ ಅವರು ತನ್ನ ಮನೆಯಲ್ಲಿ ರಾತ್ರಿ ಊಟ ಮುಗಿಸಿ ಬೈಕ್ ನಲ್ಲಿ ಮೂಡುಬಿದಿರೆಯಿಂದ ಗಂಟಲ್ ಕಟ್ಟೆಗೆ ಬರುತ್ತಿದ್ದ ಸಂದರ್ಭದಲ್ಲಿ ಬೆಳ್ತಂಗಡಿಯಿಂದ ಮೂಡುಬಿದಿರೆ ಕಡೆಗೆ ಬರುತ್ತಿದ್ದ ಬರುತ್ತಿದ್ದ ಕಾರು ಕಲ್ಲಬೆಟ್ಟು ಬಳಿ ಢಿಕ್ಕಿ ಹೊಡೆದಿದೆ. ಆಗ ಬೈಕ್ ನಿಂದ ರಸ್ತೆಗೆ ಎಸೆಯಲ್ಪಟ್ಟ ಪ್ರದೀಪ್ ಅವರ ತಲೆಗೆ ತೀವ್ರ ತರಹದ ಗಾಯವಾಗಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಮೂಡಬಿದ್ರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
























