ಪುತ್ತೂರು: ಕರ್ನಾಟಕದ ಜವಾಬ್ದಾರಿಯುತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಂತರಾಷ್ಟ್ರೀಯ ಭಯೋತ್ಪಾದನೆ ಸಂಘಟನೆಗಳ ಜೊತೆ ಸಂಪರ್ಕ ಹೊಂದಿದ್ದ ವ್ಯಕ್ತಿಯ ಜೊತೆ ವೇದಿಕೆ ಹಂಚಿಕೊಂಡ ವಿಚಾರವನ್ನು ಬಜರಂಗದಳ ತೀವ್ರವಾಗಿ ಖಂಡಿಸಿದೆ.
ಈ ಕುರಿತು ಕರ್ನಾಟಕ ವಿಶ್ವಹಿಂದು ಪರಿಷದ್ ಬಜರಂಗದಳ ಸಂಫಟನೆ ಡಿ.8 ಶುಕ್ರವಾರ ರಾಜ್ಯಪಾಲರಿಗೆ ರಾಜ್ಯದ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳ ಮೂಲಕ ಮನವಿ ನೀಡಿ ಕ್ರಮಕೈಗೊಳ್ಳಲು ಆಗ್ರಹಿಸಲಾಗುವುದು ಎಂದು ಬಜರಂಗದಳ ಪ್ರಾಂತ ಸಂಯೋಜಕ್ ಸುನೀಲ್ ಕೆ.ಅರ್, ಪ್ರಾಂತ ಸಹ ಸಂಯೋಜಕರಾದ ಮುರಳೀಕೃಷ್ಣ ಹಸಂತ್ತಡ್ಕ, ಪ್ರಭಂಜನ್ ಚಿತ್ರದುರ್ಗ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಂತರಾಷ್ಟ್ರೀಯ ಭಯೋತ್ಪಾದನೆ ಸಂಘಟನೆಗಳ ಜತೆ ಸಂಪರ್ಕ ಹೊಂದಿದವರ ನೇತೃತ್ವದಲ್ಲಿ ನಡೆದ ಅಲ್ಪಸಂಖ್ಯಾತರ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿರುವುದು ಖಂಡನೀಯವಾಗಿದ್ದು, ಜತೆಗೆ ಸಮಾವೇಶದಲ್ಲಿ ಮುಸಲ್ಮಾನ ಸಮ್ಮಾಜಕ್ಕೆ ಹತ್ತು ಸಾವಿರ ಕೋಟಿ ಅನುದಾನ ನೀಡುತ್ತೇನೆಂದು ಹೇಳಿದ್ದು ಕರ್ನಾಟಕದ ಮುಖ್ಯಮಂತ್ರಿ ಭಯೋತ್ಪಾದನೆಗೆ ಹಣಕಾಸು ವ್ಯವಸ್ಥೆ ಮಾಡುವ ವ್ಯಕ್ತಿಯೇ ಎಂದು ಸಂಶಯ ವ್ಯಕ್ತವಾಗುತ್ತಿದೆ. ನಮ್ಮ ತೆರಿಗೆ ಹಣವನ್ನು ಈ ರೀತಿಯ ತುಷ್ಟಿಕರಣಕ್ಕೋಸ್ಕರ ಅನುದಾನ ಘೋಷಣೆ ಮಾಡುವುದು ಬಹುಸಂಖ್ಯಾತ ಹಿಂದುಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.