ಅಕ್ರಮ ಕೃಷಿ ಪಂಪ್‍ಸೆಟ್‍ ಸಕ್ರಮಕ್ಕೆ ಮುಂದಾದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಲ್ಲಿರುವ 4 ಲಕ್ಷ ಅಕ್ರಮ ಕೃಷಿ ಪಂಪ್‌ಸೆಟ್‌ಗಳನ್ನು ಸಕ್ರಮಗೊಳಿಸಲು ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ.

ಇಂಧನ ಸಚಿವ ಕೆ.ಜೆ.ಜಾರ್ಜ್‍ ಈ ಬಗ್ಗೆ ಮಾಹಿತಿ ನೀಡಿ, ರಾಜ್ಯದಲ್ಲಿರುವ 4 ಲಕ್ಷ ಅಕ್ರಮ ಕೃಷಿ ಪಂಪ್‌ಸೆಟ್‌ಗಳನ್ನು ಸಕ್ರಮಗೊಳಿಸಲು ಕ್ರಮ ತೆಗೆದುಕೊಳ್ಳಲಾಗುವುದು. ಈ ನಡುವೆ ಶ್ರವಣ, ದೃಷ್ಟಿ ದೋಷ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿರುವ ಮಕ್ಕಳ ವಸತಿ ಶಾಲೆಗಳಿಗೆ ನಿಯಮದಂತೆ ತಮ್ಮ ಕ್ಷೇತ್ರಾಭಿವೃದ್ಧಿ ನಿಧಿಯ ಶೇ 15ರಷ್ಟು ವಿನಿಯೋಗಿಸಲು ವಿಧಾನ ಪರಿಷತ್‌ನ ಎಲ್ಲ ಸದಸ್ಯರು ಸಮ್ಮತಿಸಿದ್ದಾರೆ ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಕೃಷಿ ಸಚಿವ ಎನ್‍.ಚೆಲುವರಾಯಸ್ವಾಮಿ ಮಾತನಾಡಿ, ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಎನ್‌ಡಿಆರ್‌ಎಫ್‌ ಅನುದಾನ ನಿರೀಕ್ಷಿಸಿ ಬೆಳೆ ಹಾನಿ ಪರಿಹಾರದ ಮೊದಲ ಕಂತಿನ ಭಾಗವಾಗಿ ಅರ್ಹ ರೈತರಿಗೆ ತಲಾ 2 ಸಾವಿರ ಪಾವತಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top