ನವದೆಹಲಿ: ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ಮಾಡಿ ಸಂವಿಧಾನ 370ನೇ ವಿಧಿಯನ್ನು ರದ್ದುಗೊಳಿಸುವ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಪೂರ್ಣಗೊಳಿಸಿದೆ.
ಕೇಂದ್ರ ಸರಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟಿನಲ್ಲಿ ಪ್ರಶ್ನಿಸಿ ಹಲವು ಅರ್ಜಿಗಳು ದಾಖಲಾಗಿತ್ತು. ಇವುಗಳ ವಿಚಾರಣೆ ನಡೆಸಿರುವ ಸುಪ್ರೀಂ, ತೀರ್ಪನ್ನು ಡಿ. 11ಕ್ಕೆ ಕಾಯ್ದಿರಿಸಿದೆ.
ಕೇಂದ್ರ ಸರಕಾರ 2019ರಲ್ಲಿ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ಆರ್ಟಿಕಲ್ 370 ರದ್ದು ಮಾಡಿ ಐತಿಹಾಸಿಕ ನಿರ್ಧಾರವನ್ನು ಘೋಷಿಸುವ ಮೂಲಕ ಜಮ್ಮು ಮತ್ತು ಕಾಶ್ಮೀರ, ಲಡಾಖ್ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಣೆ ಮಾಡಿತ್ತು. ಆ ಸಂದರ್ಭ ಇದು ಕೋಲಾಹಲವನ್ನೇ ಸೃಷ್ಟಿಸಿತ್ತಲ್ಲದೆ ಹಲವು ವಿಪಕ್ಷ ಕೇಂದ್ರದ ನಿರ್ಧಾರವನ್ನು ವಿರೋಧಿಸಿತ್ತು. ರದ್ದುಗೊಳಿಸಿದ ಕೇಂದ್ರ ಸರಕಾರದ ನಿರ್ಧಾರದ ವಿರುದ್ಧ ಸುಪ್ರೀಂ ಕೋರ್ಟಿನಲ್ಲಿ ಅರ್ಜಿ ಸಲ್ಲಿಸಿತ್ತು.
ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ನ್ಯಾಯಮೂರ್ತಿ ಸಂಜಯ್ ಕಿಶನ್‌ಕೌಲ್, ಸಂಜೀವ್ ಖನ್ನಾ, ಬಿ.ಆರ್. ಗವಾಯಿ ಹಾಗೂ ಸೂರ್ಯಕಾಂತ್ ನೇತೃತ್ವ ಪೀಠ ಅರ್ಜಿ ವಿಚಾರಣೆ ನಡೆಸಿದೆ.