ಜಸ್ಟೀಸ್ ಜಗನ್ನಾಥ ಶೆಟ್ಟಿ ಮೆಮೊರಿಯಲ್ ಅವಾರ್ಡ್ ಗೆ ಯಕ್ಷಗಾನ ಕಲಾವಿದ ದಾಸಪ್ಪ ರೈ ಆಯ್ಕೆ

ಪುತ್ತೂರು: ಬೆಂಗಳೂರು ಆತ್ಮಾಲಯ ಅಕಾಡಮಿ ಮುಖ್ಯಸ್ಥೆ ಡಾ.ಪದ್ಮಜ ಸುರೇಶ್ ನೇತೃತ್ವದಲ್ಲಿ ಪ್ರತಿ ವರ್ಷ ನೀಡುವ 2023 ರ ಶ್ರೀಶಾಂತ ಜಸ್ಟೀಸ್ ಜಗನ್ನಾಥ ಶೆಟ್ಟಿ ಮೆಮೋರಿಯಲ್ ಅವಾರ್ಡ್‍ಗೆ ತೆಂಕು ತಿಟ್ಟು ಯಕ್ಷಗಾನದ ಖ್ಯಾತ ಕಲಾವಿದ, ಸಂಘಟಕ ಯಚ್.ದಾಸಪ್ಪ ರೈ ಆಯ್ಕೆಯಾಗಿದ್ದಾರೆ.   

ವಿದ್ವಾನ್ ಗಾನ ಕೇಸರಿ ಕುದುಮಾರ್ ವೆಂಕಟ್ರಮಣ , ಖ್ಯಾತ ಯಕ್ಷಗಾನ ಹಾಸ್ಯಗಾರ ಪೆರುವೋಡಿ ನಾರಾಯಣ ಭಟ್ , ಪೂಕಳ ಲಕ್ಷ್ಮೀನಾರಾಯಣ ಭಟ್, ಕುಂಬ್ಳೆ ಶ್ರೀಧರ ರಾವ್ ಸಂಗೀತ ಮತ್ತು ಯಕ್ಷಗಾನ ಕ್ಷೇತ್ರಗಳ ಸಾಧನೆಗಾಗಿ ಈ ಪ್ರಶಸ್ತಿ ಪುರಸ್ಕೃತರಾಗಿದ್ದರು.

ಡಿ.9 ಶನಿವಾರ ಬೆಂಗಳೂರು ನೃಪತುಂಗ ರೋಡ್ ನ ಯವನಿಕ ಯುತ್ ಸೆಂಟ್ರಲ್‌ ನಲ್ಲಿ ಜರಗುವ ಕಾರ್ಯಕ್ರಮದಲ್ಲಿ 30,000 ರೂ. ನಗದಿನೊಂದಿಗೆ ದಾಸಪ್ಪ ರೈ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು.































 
 

ಕನ್ನಡ ಮತ್ತು ತುಳು ಯಕ್ಷಗಾನ ಕ್ಷೇತ್ರದಲ್ಲಿ 5 ದಶಕಗಳಿಂದಲೂ ಹೆಚ್ಚಿನ ಕಾಲ ವೇಷದಾರಿಯಾಗಿ , ಮೇಳದ ಸ್ಥಾಪಕ ಮತ್ತು ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸಿದ ದಾಸಪ್ಪ ರೈ ಪ್ರಸ್ತುತ ಪುತ್ತೂರಿನ ಬಪ್ಪಳಿಗೆ ನಿವಾಸಿಯಾಗಿದ್ದಾರೆ. ಪುತ್ತೂರಿನ ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದ ಅಧ್ಯಕ್ಷ ಭಾಸ್ಕರ್ ಬಾರ್ಯ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top