ಬೆಳ್ತಂಗಡಿ ಮೂಲದ ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ವಿಧಿವಶ!

ಬೆಂಗಳೂರು: ಕನ್ನಡ ಚಲನಚಿತ್ರ ರಂಗದ ಹಿರಿಯ ನಟಿ ಲೀಲಾವತಿ (85) ಅವರು ಶುಕ್ರವಾರ ಸಂಜೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಕೆಲವು ಸಮಯಗಳಿಂದ ಮನೆಯಲ್ಲಿಯೇ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಬಳಿಕ ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ತೀರಾ ಹದಗೆಟ್ಟಿದ್ದು, ಚಿತ್ರರಂಗದ ಹಲವು ನಟರು ಆಗಮಿಸಿ ಆರೋಗ್ಯ ವಿಚಾರಿಸಿದ್ದರು.

1938ರಲ್ಲಿ ದಕ್ಷಿಣ ಕನ್ನಡದ ಬೆಳ್ತಂಗಡಿ ತಾಲೂಕಿನಲ್ಲಿ ಜನಿಸಿದ್ದ ಲೀಲಾವತಿ ಅವರು ಕನ್ನಡ, ತೆಲುವು, ತಮಿಳು, ಮಲಯಾಳಂ ಸಿನಿಮಾಗಳಲ್ಲಿ ಅಭಿನಯಿಸಿ, ರಾಜ್ಯದ ಮನೆಮಾತಾಗಿದ್ದರು. ನಾಗಕನ್ನಿಕೆ ಚಿತ್ರದ ಸಖಿ ಪಾತ್ರದ ಮೂಲಕ ಸಿನಿಮಾ ರಂಗಕ್ಕೆ ಪ್ರವೇಶಿಸಿದ್ದರು. ಸುಮಾರು 600 ಸಿನಿಮಾಗಳಲ್ಲಿ ನಟಿಸಿರುವ ಲೀಲಾವತಿ, 400 ಕನ್ನಡ ಸಿನಿಮಾಗಳಲ್ಲೇ ಅಭಿನಯಿಸಿದ್ದರು.































 
 

ಮಾಂಗಲ್ಯ ಯೋಗ ಎನ್ನುವ ಸಿನಿಮಾದಲ್ಲಿ ಮೊದಲ ಬಾರಿಗೆ ನಾಯಕಿಯಾಗಿ ಅಭಿನಯಿಸಿದರು. 2000ರಲ್ಲಿ ಡಾ. ರಾಜ್ ಕುಮಾರ್ ಜೀವಮಾನ ಸಾಧನೆ ಪ್ರಶಸ್ತಿ ಪಡೆದುಕೊಂಡರು. 2008ರಲ್ಲಿ ತುಮಕೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿತ್ತು. ಫಿಲ್ಮ್ ಫೇರ್ ಅವಾರ್ಡ್ಸ್ ಅನ್ನು ತನ್ನ ಮುಡಿಗೇರಿಸಿಕೊಂಡಿದ್ದರು.

ಸೋಲದೇವನ ಹಳ್ಳಿಯಲ್ಲಿ ಸ್ವಂತ ಖರ್ಚಿನಿಂದ ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಿಸಿದ್ದರು. ಇದರೊಂದಿಗೆ ಪಶು ಆಸ್ಪತ್ರೆ ಸೇರಿದಂತೆ ಹಲವು ಸಾಮಾಜಿಕ ಕೆಲಸಗಳಿಂದಲೂ ಗುರುತಿಸಿಕೊಂಡಿದ್ದ ನಟಿ ಲೀಲಾವತಿ ಅವರು ಪುತ್ರ ವಿನೋದ್ ರಾಜ್ ಅವರನ್ನು ಅಗಲಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top