ಪುತ್ತೂರು: ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ವೀರಮಂಗಲ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಜಂಟಿ ಆಶ್ರಯದಲ್ಲಿ ಭಾರತೀಯ ಭಾಷಾ ಉತ್ಸವದ ಅಂಗವಾಗಿ ಕನ್ನಡ ಭಾಷಾ ರಸಪ್ರಶ್ನೆ ಕಾರ್ಯಕ್ರಮ ವೀರಮಂಗಲ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ರಂಗ ಕಲಾವಿದ ರಂಗಯ್ಯ ಬಳ್ಳಾಲ್ ಕೆದಂಬಾಡಿ ಬೀಡು ಅವರು ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಏರ್ಪಡಿಸಿದ್ದರು. ಒಂದನೇ ತರಗತಿಯಿಂದ 7ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ರಸಪ್ರಶ್ನೆ ಏರ್ಪಡಿಸಿ, ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಿಸಲಾಯಿತು.
ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್, ವೀರಮಂಗಲ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕ ತಾರಾನಾಥ ಸವಣೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಶಿಕ್ಷಣ ಸಂಯೋಜಕಿ ಅಮೃತಕಲಾ ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರು ಉಪಸ್ಥಿತರಿದ್ದರು.