ಪುತ್ತೂರು : ಪಂಜಾಬ್‌ನ ಲ್ಯಾಮ್ರನ್ ಟೆಕ್ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ 70ನೇ ಸೀನಿಯರ್ ರಾಷ್ಟ್ರೀಯ ಮಹಿಳೆಯರ ಕಬಡ್ಡಿ ಚಾಂಪಿಯನ್‌ಶಿಪ್ ಗೆ ಕರ್ನಾಟಕ ತಂಡವನ್ನು ಪ್ರತಿನಿಧಿಸಲು ಕಾಣಿಯೂರಿನ ಸೌಮ್ಯ ಪೂಜಾರಿ ಆಯ್ಕೆಯಾಗಿದ್ದಾರೆ.
ಸೌಮ್ಯ ಪೂಜಾರಿ ಕಾಣಿಯೂರು ಅಬೀರ ರಾಮಣ್ಣ ಪೂಜಾರಿ ಮತ್ತು ಲಲಿತಾ ದಂಪತಿ ಪುತ್ರಿ ಹಾಗೂ ಪುತ್ತೂರಿನ ಪೊಲೀಸ್ ಇಲಾಖೆಯ ಸಿಬ್ಬಂದಿ ಸಂತೋಷ್ ಕುಮಾರ್ ಅವರ ಸಹೋದರಿ.
ಕಾಣಿಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪ್ರಗತಿ ಆಂಗ್ಲಮಾದ್ಯಮ ಶಾಲೆ ಹಾಗೂ ಆಳ್ವಾಸ್ ವಿದ್ಯಾಸಂಸ್ಥೆಯ ಹಿರಿಯ ವಿದ್ಯಾರ್ಥಿನಿಯಾಗಿರುವ ಸೌಮ್ಯಾ ಅವರು ಪ್ರಸ್ತುತ ಬೆಂಗಳೂರಿನಲ್ಲಿ ಪೊಲೀಸ್ ಇಲಾಖೆಯಲ್ಲಿ ಉದ್ಯೋಗಿಯಾಗಿದ್ದು, ಕರ್ನಾಟಕ ರಾಜ್ಯ ಪೊಲೀಸ್ ಮಹಿಳಾ ಕಬಡ್ಡಿ ತಂಡದ ಸದಸ್ಯೆಯಾಗಿದ್ದಾರೆ.