ರಾಜಭವನಕ್ಕೂ ಬಂದ ಬಾಂಬ್ ಬೆದರಿಕೆ ಕರೆ!!

ರಾಜ್ಯದ ಶಕ್ತಿ ಕೇಂದ್ರಗಳಲ್ಲಿ ಒಂದಾದ ರಾಜ ಭವನಕ್ಕೂ ಬಾಂಬ್‌ ಬೆದರಿಕೆ ಕರೆ ಬಂದಿದೆ.

ಬೆಂಗಳೂರಿನ ಶಾಲೆಗಳಲ್ಲಿ ಬಾಂಬ್ ಇಡಲಾಗಿದೆ ಎಂದು ನಿಗೂಢ ತಾಣದಿಂದ ಈಮೇಲ್‌ ಮಾಡಿ ಭಾರಿ ಆತಂಕಕ್ಕೆ ಕಾರಣವಾದ ಘಟನೆ ಬೆನ್ನಲ್ಲೇ ಇದೀಗ ರಾಜಭವನಕ್ಕೂ ಬಾಂಬ್ ಬೆದರಿಕೆ ಕರೆ ಬಂದಿದೆ.

ರಾಜಭವನದಲ್ಲಿ ಬಾಂಬ್ ಇಡಲಾಗಿದೆ ಎಂದು ಸೋಮವಾರ ರಾತ್ರಿ 11.30ರ ಸುಮಾರಿಗೆ ಕರೆ ಮಾಡಿ ಬಾಂಬ್ ಇಟ್ಟಿರುವುದಾಗಿ ವ್ಯಕ್ತಿಯೊಬ್ಬ ಹೇಳಿದ್ದಾನೆಂದು ತಿಳಿದುಬಂದಿದೆ.





















































 
 

ಬೆದರಿಕೆ ಕರೆ ಬಂದ ಕೂಡಲೇ ಸಮೀಪದ ಪೊಲೀಸ್‌ ಠಾಣೆಗೆ ಮಾಹಿತಿ ನೀಡಲಾಗಿದ್ದು, ಕೂಡಲೇ ಪೊಲೀಸರು ಬಾಂಬ್‌ ಸ್ಕ್ವಾಡ್‌ ಮತ್ತು ಡಾಗ್‌ ಸ್ಕ್ವಾಡ್‌ನೊಂದಿಗೆ ಅಲ್ಲಿಗೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ರಾಜಭವನಕ್ಕೆ ಹೋಗಿ ಪರಿಶೀಲನೆ ನಡೆಸಿದ ಪೊಲೀಸರಿಗೆ ಸದ್ಯಕ್ಕೆ ಯಾವುದೇ ಅನುಮಾನಾಸ್ಪದ ವಸ್ತುಗಳು ಸಿಕ್ಕಿಲ್ಲ. ಆದರೆ, ಸ್ಥಳದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

ರಾಜಭವನ ಸ್ಥಳ ವಿಶಾಲವಾದ ಜಾಗವಾಗಿದ್ದು, ಯಾವ ಭಾಗದಲ್ಲಿ ಇಡಲಾಗಿದೆ ಎಂಬ ಮಾಹಿತಿಯನ್ನು ವ್ಯಕ್ತಿ ನೀಡಿಲ್ಲ. ಈ ನಡುವೆ, ರಾಜಭವನಕ್ಕೆ ಯಾವ ನಂಬರ್‌ನಿಂದ ಕರೆ ಮಾಡಲಾಗಿದೆ. ಕರೆ ಮಾಡಿದ ವ್ಯಕ್ತಿ ಯಾರು ಎಂಬ ವಿಚಾರ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಶಂಕಿತ ವ್ಯಕ್ತಿ ವಶಕ್ಕೆ

ಈ ನಡುವೆ ಉಪ್ಪಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶಂಕಿತನನ್ನು ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಪೊಲೀಸರು ವಶಕ್ಕೆ ಪಡೆದುಕೊಂಡಿರುವ ವ್ಯಕ್ತಿ ಯಾರು? ಆತನ ಹಿನ್ನೆಲೆ ಏನು ಎಂಬುದರ ಮಾಹಿತಿ ತಿಳಿದು ಬಂದಿಲ್ಲ. ಸದ್ಯ ವಶದಲ್ಲಿರೋ ವ್ಯಕ್ತಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.

ಬೆದರಿಕೆ ಕರೆ ಬೆನ್ನಲ್ಲೇ ರಾಜಭವನದ ಬಳಿ ಭದ್ರತಾ ಸಿಬ್ಬಂದಿಯನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಲಾಗಿದೆ. ರಾಜಭವನದಲ್ಲಿ ಕೆಲಸ ಮಾಡುವ ಸಿಬ್ಬಂದಿಯನ್ನು ಪರಿಶೀಲನೆ ನಡೆಸಿ ಒಳಗಡೆ ಕಳುಹಿಸಲಾಗುತ್ತಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top