ಪುತ್ತೂರು: ಇಲ್ಲಿನ ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾವೇಶ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ತಾಲೂಕು ಸಮಿತಿಗಳ ಪದಪ್ರಧಾನ ಸಮಾರಂಭದ ಪೂರ್ವಭಾವಿ ಸಭೆ ಡಿ. 13ರಂದು ತೆಂಕಿಲ ಚುಂಚಶ್ರೀ ಸಭಾಂಗಣದಲ್ಲಿ ನಡೆಯಿತು.
ಡಿ. 24ರಂದು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಬೆಳಿಗ್ಗೆ 6ರಿಂದ ಗಣಪತಿ ಹವನ, 8 ಗಂಟೆಗೆ ಸತ್ಯನಾರಾಯಣ ಪೂಜೆ ಆರಂಭಗೊಳ್ಳಲಿದೆ. ಬಳಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಈ ಎಲ್ಲಾ ಕಾರ್ಯಕ್ರಮಗಳು ಅಚ್ಚುಕಟ್ಟಾಗಿ ಮೂಡಿಬರಲು ಎಲ್ಲರೂ ಸಹಕರಿಸಬೇಕು ಎಂದು ಸಭೆಯಲ್ಲಿ ಮನವಿ ಮಾಡಿಕೊಳ್ಳಲಾಯಿತು. ಇದೇ ಸಂದರ್ಭ ಅದೃಷ್ಟಶಾಲಿ ಮಹಿಳೆಯರಿಗೆ ಪ್ರಸಾದದ ರೂಪದಲ್ಲಿ ಸಾರಿ ವಿತರಣೆಯೂ ನಡೆಯಲಿದೆ ಎಂದು ಮಾಹಿತಿ ನೀಡಲಾಯಿತು.
ಸಮಾರಂಭದಲ್ಲಿ ಡಿ. 26ರಂದು ನಡೆಯಲಿರುವ ಕಡಬ ಒಕ್ಕಲಿಗ ಗೌಡ ಸಮುದಾಯ ಭವನದ ಶಿಲಾನ್ಯಾಸ ಸಮಾರಂಭದ ಆಮಂತ್ರಣವನ್ನು ಬಿಡುಗಡೆಗೊಳಿಸಲಾಯಿತು.
ಸಲಹಾ ಸಮಿತಿ ಅಧ್ಯಕ್ಷ, ಮಾಜಿ ಶಾಸಕ ಸಂಜೀವ ಮಠಂದೂರು, ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ ವಿಶ್ವನಾಥ ಗೌಡ ಕೆಯ್ಯೂರು, ನಿಯೋಜಿತ ಅಧ್ಯಕ್ಷ ರವಿ ಮುಂಗ್ಲಿಮನೆ, ಕಾರ್ಯಕ್ರಮ ಸಂಚಾಲಕ ಚಿದಾನಂದ ಬೈಲಾಡಿ, ಗೌಡ ಮಹಿಳಾ ಸಂಘದ ಅಧ್ಯಕ್ಷೆ ಮೀನಾಕ್ಷಿ ಡಿ. ಗೌಡ ಮೊದಲಾದವರು ಉಪಸ್ಥಿತರಿದ್ದರು.