ಬುಧವಾರ ಸಂಸತ್ ಮೇಲೆ ದಾಳಿ ನಡೆಸಿದ ಆರು ಮಂದಿಯಲ್ಲಿ ಇನ್ನಿಬ್ಬರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಮೈಸೂರು ಮೂಲದ ಮನೋರಂಜನ್ ಸಹಿತ ಇತರ ನಾಲ್ವರನ್ನು ಬಂಧಿಸಿದ್ದು, ವಿಚಾರಣೆ ನಡೆಸಲಾಗುತ್ತಿದೆ.
ಆರು ಮಂದಿಯ ಬೇರೆ ಬೇರೆ ರಾಜ್ಯದವರಾಗಿರುವುದರಿಂದ ಯಾವುದೋ ಉದ್ದೇಶವಿಟ್ಟುಕೊಂಡೇ ಈ ಕೃತ್ಯ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಇವರ ಹಿಂದಿರುವವರ್ಯಾರು ಎಂಬ ಹಿನ್ನೆಲೆಯಲ್ಲೂ ಚರ್ಚೆ ನಡೆಯುತ್ತಿದ್ದು, ತನಿಖೆ ನಡೆಯುತ್ತಿದೆ.
ಈ ನಡುವೆ ಸಂಸದ ಪ್ರತಾಪ್ ಸಿಂಹ ಅವರ ಬಂಧನಕ್ಕೆ ಆಗ್ರಹಿಸಿ ಮೈಸೂರಿನ ಅವರ ಕಚೇರಿಗೆ ಮುತ್ತಿಗೆ ಹಾಕಲಾಯಿತು. ಯುವ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿ, ಪ್ರತಾಪ್ ಸಿಂಹ ಅವರ ಸಂಸತ್ ಸದಸ್ಯತ್ವ ರದ್ದುಗೊಳಿಸಲು ಆಗ್ರಹಿಸಿದರು.