ಪುತ್ತೂರು: ಪುತ್ತೂರು ತಾಲೂಕಿನ ಕೊಳ್ತಿಗೆ ಶಾಲಾ ವಾರ್ಷಿಕೋತ್ಸವ ಹಾಗೂ ಹಳೆ ವಿದ್ಯಾರ್ಥಿ ಸಂಘದ ರಜತ ಸಂಭ್ರಮದ ಅಂಗವಾಗಿ ಪುತ್ತೂರು ತಾಲೂಕಿನಲ್ಲೇ ಪ್ರಪ್ರಥಮ ಬಾರಿಗೆ ಉಡುಪಿ ಅಭಿನಯ ಕಲಾವಿದರು ತಂಡದಿಂದ ಕುತೂಹಲಭರಿತ ತುಳು ಹಾಸ್ಯಮಯ ನಾಟಕ ‘ಶಾಂಭವಿ’ ಕೊಳ್ತಿಗೆ ಶಾಲಾ ಸಭಾಂಗಣದಲ್ಲಿ ಡಿ.16 ಶನಿವಾರ ರಾತ್ರಿ ಗಂಟೆ 11 ರಿಂದ ಪ್ರದರ್ಶನಗೊಳ್ಳಲಿದೆ ಎಂದು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಯತ್ ಕೆಮ್ಮಾರ ತಿಳಿಸಿದ್ದಾರೆ.
ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಂಜೆ 6 ರಿಂದ ಅಂಗನವಾಡಿ ಪುಟಾಣಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, 6.30 ರಿಂದ ಕೊಳ್ತಿಗೆ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ರಾತ್ರಿ 7.30 ರಿಂದ ಮಾಲೆತ್ತೋಡಿ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಖೃತಿಕ ಕಾರ್ಯಕ್ರಮಗಳು ಜರಗಲಿದೆ ಎಂದು ತಿಳಿಸಿದರು.
ರಾತ್ರಿ 8 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ದೀಪ ಪ್ರಜ್ವಲನೆ ಮಾಡಲಿದ್ದು, ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆ ವಹಿಸುವರು. ಕೊಳ್ತಿಗೆ ಗ್ರಾಪಂ ಅಧ್ಯಕ್ಷೆ ಅಕ್ಕಮ್ಮ ಬಹುಮಾನ ವಿತರಿಸುವರು. ಮುಖ್ಯ ಅತಿಥಿಗಳಾಗಿ ಗ್ರಾಪಂ ಸದಸ್ಯರಾದ ಶಾಮ್ ಸುಂದರ ರೈ ಕೆರೆಮೂಲೆ, ವೇದಾವತಿ ಕೆಮ್ಮಾರ, ಬಾಲಕೃಷ್ಣ ಪಡ್ರೆ, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್., ವಿದ್ಯಾಮಾತ ಫೌಂಡೇಶನ್ ಅಧ್ಯಕ್ಷ ಭಾಗ್ಯೇಶ್ ರೈ ಪಾಲ್ಗೊಳ್ಳಲಿದ್ದಾರೆ. ತುಳು ಸಾಹಿತ್ಯ ಅಕಾಡೆಮಿ ಮಾಜಿ ರಿಜಿಸ್ಟ್ರಾರ್ ಚಂದ್ರಹಾಸ ರೈ ಪ್ರಧಾನ ಉಪನ್ಯಾಸ ಮಾಡುವರು ಎಂದು ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಎಸ್‍ಡಿಎಂಸಿ ಅಧ್ಯಕ್ಷ ಜನಾರ್ಧನ ಎಂ., ರಜತ ಸಂಭ್ರಮ ಸಮಿತಿ ಅಧ್ಯಕ್ಷ ಚಂದ್ರಶೇಖರ ಬಾಯಂಬಾಡಿ, ಪ್ರಧಾನ ಕಾರ್ಯದರ್ಶಿ ಶೋಭಿತ್ ಕೆಮ್ಮಾರ, ಹಳೆ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ವಿಜೇಶ್ ರೈ, ಉಪಸ್ಥಿತರಿದ್ದರು.