ಮಾದಕ ವ್ಯಸನಿಗಳಿಂದ ದೇಶಕ್ಕೆ ಅಪಾಯ | ಬೆಳಗಾವಿ ಅಧಿವೇಶನದಲ್ಲಿ ಶಾಸಕ ಅಶೋಕ್ ರೈ ಆಗ್ರಹ

ಪುತ್ತೂರು: ಮಾದಕ ವ್ಯಸನಿಗಳು ಸಮಾಜ ಕಂಠಕರಾಗುತ್ತಿದ್ದಾರೆ. ಯವು ಪೀಳಿಗೆ ಮಾದಕ ವ್ಯಸನಕ್ಕೆ ಬಲಿಯಾಗುತ್ತಿದೆ. ಇದು ಅತ್ಯಂತ ಗಂಭೀರ ವಿಚಾರವಾಗಿದ್ದು, ಮುಂದುವರೆದರೆ ವ್ಯಸನಿಗಳಿಂದ ರಾಜ್ಯಕ್ಕೆ, ದೇಶಕ್ಕೆ ತೊಂದರೆ ಉಂಟಾಗಬಹುದು. ಇಂತವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮಕೈಗೊಳ್ಳಬೇಕು ಎಂದು ಪುತ್ತೂರು ಶಾಸಕ ಅಶೋಕ್ ರೈ ಬೆಳಗಾವಿ ವಿಧಾನಸಭಾ ಅಧಿವೇಶನದಲ್ಲಿ ಸರಕಾರವನ್ನು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಮಾದಕ ವ್ಯಸನಿಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ, ಯುವ ಸಮೂಹ ಇದಕ್ಕೆ ಬಲಿಯಾಗುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 147 ಪೆಡ್ಲರ್‌ಗಳ ವಿರುದ್ದ ಪ್ರಕರಣ ದಾಖಲಾಗಿದೆ. 528 ಮಂದಿ ಮಾದಕ ವ್ಯಸನಿಗಳ ವಿರುದ್ದ ಪ್ರಕರಣ ದಾಖಲಾಗಿದೆ, ಪುತ್ತೂರಿನಲ್ಲಿ 26 ಪ್ರಕರಣಗಳು ದಾಖಲಾಗಿದೆ. ಇದನ್ನು ನಿಯಂತ್ರಣ ಮಾಡಲು ಸರಕಾರ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ವ್ಯಸನ ಮುಕ್ತ ಕೇಂದ್ರಗಳನ್ನು ಆರಂಭಿಸಿ:



































 
 

ರಾಜ್ಯದ ಪ್ರತೀ ತಾಲೂಕುಗಳಲ್ಲಿ ಡಿ ಎಡಿಕ್ಸನ್ ಸೆಂಟರ್‌ಗಳನ್ನು ಆರಂಭಿಸಬೇಕು. ಈ ಕೇಂದ್ರಗಳಲ್ಲಿ ಅವರಿಗೆ ಚಿಕಿತ್ಸೆಯನ್ನು ನೀಡಬೇಕಿದೆ. ಪೊಲೀಸ್ ಇಲಾಖೆ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು. ನಿರ್ಜನ ಪ್ರದೇಶಗಳ ಬಗ್ಗೆ ಪೊಲೀಸರು ಹೆಚ್ಚು ನಿಗಾ ಇಡಬೇಕು, ಕೆಲವು ಕಡೆಗಳಲ್ಲಿ ವೆಂಟೆಡ್ ಡ್ಯಾಮ್‌ಗಳ ಬಳಿ ಈ ವ್ಯವಹಾರಗಳು ಹೆಚ್ಚಾಗಿ ನಡೆಯುತ್ತಿದೆ. ಇದೆಲ್ಲವನ್ನೂ ತಡೆಗಟ್ಟುವ ಮೂಲಕ ಪೊಲೀಸ್ ಇಲಾಖೆ ಮಾದಕ ವ್ಯಸನಿಗಳ ಭೇಟೆಯಾಡಬೇಕು ಎಂದು ಶಾಸಕರು ಆಗ್ರಹಿಸಿದರು.

ಶಾಲಾ ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ ಮಾಡಿ:

ಪ್ರತೀ ಶಾಲಾ ಕಾಲೇಜುಗಳಲ್ಲಿ ಮಾದಕ ದ್ರವ್ಯ ವ್ಯಸನದಿಂದ ಅಗುವ ದುಷ್ಪರಿಣಾಮದ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಮಾಡಬೇಕು. ಈ ರೀತಿಯ ಕಾರ್ಯಕ್ರಮವನ್ನು ಮಾಡುವ ಮೂಲಕ ಯುವ ಸಮೂಹ ಮತ್ತು ಯುವ ವಿದ್ಯಾರ್ಥಿ ಸಮೂಹ ಈ ಚಟಗಳಿಗೆ ಬಲಿಯಾಗದಂತೆ ಎಚ್ಚರಿಕಾ ವ್ಯವಸ್ಥೆಗಳನ್ನು ಮಾಡಬೇಕು ಎಂದು ಶಾಸಕರು ಸರಕಾರವನ್ನು ಆಗ್ರಹಿಸಿದರು.

ಪುತ್ತೂರಿನಲ್ಲಿ ಡಿಎಡಿಕ್ಸನ್ ಸೆಂಟರ್ ಗೆ ಮನವಿ :

ಪುತ್ತೂರಿನಲ್ಲಿ ಡಿ ಎಡಿಕ್ಸನ್ ಸೆಂಟರ್ ಪ್ರಾರಂಭ ಮಾಡುವಂತೆ ಶಾಸಕರು ಗೃಹ ಸಚಿವರಾದ ಡಾ. ಎಚ್ ಜಿ ಪರಮೇಶ್ವರ್ ಅವರಲ್ಲಿ ಮನವಿ ಮಾಡಿದರು. ಈ ವಿಚಾರವನ್ನು ಪರಿಶೀಲನೆ ಮಾಡುವುದಾಗಿ ಸಚಿವರು ಭರವಸೆ ನೀಡಿದರು. ದ ಕ ಜಿಲ್ಲೆಯಲ್ಲಿ ಮಂಗಳೂರಿನಲ್ಲಿ ಮಾತ್ರ ಡಿ ಎಡಿಕ್ಸನ್ ಕೇಂದ್ರವಿದ್ದು ಉಪ ವಿಭಾಗವಾದ ಪುತ್ತೂರಿನಲ್ಲಿ ವ್ಯಸನ ಮುಕ್ತ ಕೇಂದ್ರವನ್ನು ಆರಂಭಿಸಬೇಕು ಎಂದು ಶಾಸಕರು ಮನವಿ ಮಾಡಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top