ಮಂಗಳೂರು: ಪತ್ನಿ ಹಾಗೂ ಮೂರು ವರ್ಷದ ಪುತ್ರ ನಾಪತ್ತೆಯಾಗಿರುವ ಬಗ್ಗೆ ಬಜಪೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಬಜ್ಜೆಯ ಕೆ.ಪಿ. ನಗರದ ಶಾಹಿಸ್ತಾ ಮಂಜೀಲ್ನ ಅಹ್ಮದ್ ಮನ್ಸೂದ್ ಅವರ ಪತ್ನಿ ಶರೀನಾ ವೈ. (24) ಹಾಗೂ ಮಗ ಮಹ್ಮದ್ ತೋಹಾರ್ (3) ಎಂದು ಗುರುತಿಸಲಾಗಿದೆ.
ಅಹ್ಮದ್ ಮನ್ಸೂದ್ ಅವರು ತಾಯಿ ಮತ್ತು ಪತ್ನಿಯೊಂದಿಗೆ ವಾಸವಾಗಿದ್ದು ಸುಮಾರು 6 ವರ್ಷಗಳ ಹಿಂದೆ ಸುಳ್ಯದ ಶರಿನಾ (24) ಅವರನ್ನು ವಿವಾಹವಾಗಿದ್ದರು. ದಂಪತಿಗಳಿಗೆ 3 ವರ್ಷದ ಗಂಡು ಮಗುವಿದೆ. ಶರೀನಾ ಗರ್ಭಿಣಿಯಾಗಿದ್ದು ದಂಪತಿ ಅನ್ನೋನ್ಯವಾಗಿದ್ದು, ರಾತ್ರಿ ಎಲ್ಲರೂ ಮಲಗಿದ್ದಾಗ ಶರೀನಾ ಪುತ್ರನೊಂದಿಗೆ ಮನೆ ಬಿಟ್ಟು ಹೋಗಿದ್ದರು. ಮರುದಿನ ಬೆಳಗ್ಗೆ ಮನೆಯ ಎದುರಿನ ಸಿಸಿ ಕೆಮರಾ ಪರಿಶೀಲಿಸಿದಾಗ ಅದು ದೃಢಪಟ್ಟಿದೆ. ಶರೀನಾ ಬಟ್ಟೆಬರೆ ಹಾಗೂ 5 ಗ್ರಾಂ ಚಿನ್ನದ ಆಭರಣ ತೆಗೆದುಕೊಂಡು ಹೋಗಿದ್ದು ತಾಯಿ ಮನೆಗೆ ಹೋಗುತ್ತಿರುವುದಾಗಿ ಚೀಟಿ ಬರೆದಿಟ್ಟು ಹೋಗಿದ್ದಾರೆ. ಆದರೆ ಅವರ ತಾಯಿಗೆ ಫೋನ್ ಮಾಡಿ ವಿಚಾರಿಸಿದಾಗ ಅಲ್ಲಿಗೆ ತಲುಪಿರಲಿಲ್ಲ. ನೆರೆಕೆರೆ, ನೆಂಟರ ಮನೆಯಲ್ಲಿ ಹುಡುಕಾಡಿದ್ದು ಎಲ್ಲಿಯೂ ಪತ್ತೆಯಾಗದ ಹಿನ್ನೆಲೆಯಲ್ಲಿ ಅಹ್ಮದ್ ಮನ್ಸೂದ್ ಡಿಬಜೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.