ಕುದ್ಮಾರು: ಅಯೋಧ್ಯೆ ಶ್ರೀ ರಾಮಜನ್ಮ ಭೂಮಿಯಲ್ಲಿರುವ ಶ್ರೀ ಶ್ರೀ ರಾಮ ಮಂದಿರದಲ್ಲಿ ಜ.22 ರಂದು ಶ್ರೀರಾಮನ ಪ್ರಾಣ ಪ್ರತಿಷ್ಠೆ ಅಂಗವಾಗಿ ಅಯೋಧ್ಯೆಯಿಂದ ಆಗಮಿಸಿದ ಪವಿತ್ರ ಮಂತ್ರಾಕ್ಷತೆಯನ್ನು ಮೆರವಣಿಗೆ ಮೂಲಕ ಮುಗೇರು ಶ್ರೀಮಹಾವಿಷ್ಣುಮೂರ್ತಿ ದೇವಸ್ಥಾನನಕ್ಕೆ ತರಲಾಯಿತು.


ಕುದ್ಮಾರು, ಸವಣೂರು ಹಾಗೂ ಪುಣ್ಚಪ್ಪಾಡಿಯ ರಾಮಭಕ್ತರು ಅಯೋಧ್ಯೆಯ ಪವಿತ್ರ ಮಂತ್ರಾಕ್ಷತೆಯನ್ನು ಸ್ವೀಕರಿಸಿದರು.
ಬಳಿಕ ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪವಿತ್ರ ಮಂತ್ರಾಕ್ಷತೆಯನ್ನಿರಿಸಿ ಅದಕ್ಕೆಅರ್ಚಕರು ಆರತಿ ಬೆಳಗಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರು, ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.