ಪುತ್ತೂರು : ಪುತ್ತೂರು ನಗರಸಭೆಯಲ್ಲಿ ತೆರವಾದ ಎರಡು ಸ್ಥಾನಗಳಿಗೆ ಡಿ.27 ರಂದು ನಡೆಯುವ ಉಪಚುನಾವಣೆಗೆ ನಾಮಪತ್ರ ಸಲ್ಲಿಸಲು ಅಂತಿಮ ದಿನವಾದ ಶುಕ್ರವಾರ ಕಾಂಗ್ರೇಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು.
ನಗರಸಭೆಯ ವಾರ್ಡ್ ನಂ.1ರ ಸ್ಥಾನಕ್ಕೆ ದಿನೇಶ್ ಶೇವಿರೆ ಹಾಗೂ ವಾರ್ಡ್ 11ರ ಸ್ಥಾನಕ್ಕೆ ದಾಮೋದರ ಭಂಡಾರ್ಕರ್ ನಾಮಪತ್ರ ಸಲ್ಲಿಸಿದರು.

ಅಭ್ಯರ್ಥಿಗಳು ಹಾಗೂ ಕಾಂಗ್ರೇನ ಮುಖಂಡರು ಬೆಳಿಗ್ಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಬಳಿಕ ವೆಂಕಟರಮಣ ದೇವಸ್ಥಾನ, ಪುತ್ತೂರಿನ ಕೇಂದ್ರ ಮಸೀದಿ ಹಾಗೂ ಚರ್ಚ್ ನಲ್ಲಿ ಪ್ರಾರ್ಥಿಸಿದ ನಂತರ ನಗರಸಭೆಗೆ ತೆರಳಿ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಎಂ.ಬಿ. ವಿಶ್ವನಾಥ ರೈ, ನಗರ ಕಾಂಗ್ರೆಸ್ ಅಧ್ಯಕ್ಷ ಎಚ್. ಮಹಮ್ಮದ್ ಆಲಿ, ವಿಟ್ಲ-ಉಪ್ಪಿನಂಗಡಿ ಬ್ಲಾಕ್‌ನ ಅಧ್ಯಕ್ಷ ಡಾ. ರಾಜರಾಂ, ರಾಜ್ಯ ವಕ್ತಾರ ಅಮಳ ರಾಮಚಂದ್ರ ಭಟ್, ಪಂಜಿಗುಡ್ಡೆ ಈಶ್ವರ ಭಟ್, ಯುವ ಕಾಂಗ್ರೆಸ್ ಜಿಲ್ಲಾ ಮುಖಂಡ ರಂಜಿತ್ ಬಂಗೇರ ಮತ್ತಿತರರು ಉಪಸ್ಥಿತರಿದ್ದರು.