ಸುಳ್ಯ : ಹತ್ತನೇ ತರಗತಿ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನಲ್ಲಿ ಶುಕ್ರವಾರ ನಡೆದಿದೆ.
ಸುಳ್ಯ ತಾಲೂಕಿನ ಎಲಿಮಲೆ ಸರಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಶಮಂತ್ ಆತ್ಮಹತ್ಯೆ ಮಾಡಿಕೊಂಡಾತ.
ಮೂಲತಃ ಚೊಕ್ಕಾಡಿಯವರಾಗಿರುವ, ಪ್ರಸ್ತುತ ನೆಲ್ಲೂರು ಕೆಮ್ರಾಜೆ ಗ್ರಾಮದ ಹೊಟ್ಟುಚೋಡಿಯಲ್ಲಿ ನೆಲೆಸಿರುವ ದಿ| ವಾಸುದೇವ ಎಂಬವರ ಪುತ್ರ ಶಮಂತ್ ಶುಕ್ರವಾರ ಬೆಳಿಗ್ಗೆ 6 ಗಂಟೆಯ ಸುಮಾರಿಗೆ ಮನೆಯಿಂದ ಹೊರಟು ಬಂದು ಶಾಲಾ ಆವರಣದ ಶೌಚಾಲಯದ ಹಿಂಬದಿ ಗಿಡವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಶಮಂತ್ ಕಳೆದ ವರ್ಷ ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಸಾವಿನ ದವಡೆಯಿಂದ ಪಾರಾಗಿದ್ದ ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣಗಳು ತಿಳಿದು ಬಂದಿಲ್ಲ.