ರೈತರ ಬೆಳೆಸಾಲ ಬಡ್ಡಿ ಮನ್ನಾ | ಬೆಳಗಾವಿ ಅಧಿವೇಶನದಲ್ಲಿ ಸಿಎಂ ಘೋಷಣೆ

ಬೆಳಗಾವಿ: ಕೃಷಿ ಸಾಲವನ್ನು ಪಡಕೊಂಡು ಅಸಲನ್ನು ಮರುಪಾವತಿ ಮಾಡುವವರಿಗೆ ಸಾಲದ ಮೇಲಿನ ಬಡ್ಡಿಯನ್ನು ಮನ್ನಾ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

ಬೆಳಗಾವಿಯಲ್ಲಿ ನಡೆದ ಚಳಿಗಾಲದ ವಿಧಾನಸಭೆ ಅಧಿವೇಶನದ ಕೊನೆಯ ದಿನವಾದ ಶುಕ್ರವಾರ ಕಲಾಪದಲ್ಲಿ ಉತ್ತರ ಕರ್ನಾಟಕ ಭಾಗದ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಈ ವಿಚಾರ ತಿಳಿಸಿದರು.

ರೈತರ ಸಾಲದ ಮೇಲಿನ ಬಡ್ಡಿಯನ್ನು ಮನ್ನಾ ಮಾಡುತ್ತೇವೆ ಎಂದು ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿರಲಿಲ್ಲ. ಆದರೂ ಮಾಡುತ್ತೇವೆ. ಬರ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಸಹಕಾರ ಸಂಘಗಳು ಮತ್ತು ಬ್ಯಾಂಕ್‌ಗಳಲ್ಲಿ ರೈತರು ಪಡೆದಿರುವ ಬೆಳೆ ಸಾಲದ ಮೇಲಿನ ಬಡ್ಡಿಯನ್ನು ಮನ್ನಾಮಾಡುತ್ತೇವೆ ಎಂದಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top