ಬಸ್ಸಿಗೆ ಡಿಕ್ಕಿ ಹೊಡೆದ ಕಾರು | ನಾಲ್ವರಿಗೆ ಗಾಯ

ನೆಲ್ಯಾಡಿ: ಕಾರೊಂದು ಕೆಎಸ್‍ ಆರ್ ಟಿಸಿ ಬಸ್ಸಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿಯಲ್ಲಿ ನಡೆದಿದೆ.

ಕಾರಿನಲ್ಲಿದ್ದ ಮಹೇಶ್‍ (28), ಅಭಿಷೇಕ್‍ (30), ಮುತ್ತುರಾಜ್ (30), ಹಾಗೂ ನವೀನ್ (29) ಗಾಯಗೊಂಡವರು.

ಮುಂಜಾನೆ 5.30ರ ಸುಮಾರಿಗೆ ಈ ಅಪಘಾತ ನಡೆದಿದ್ದು, ಗಾಯಗೊಂಡವರು ಬೆಂಗಳೂರಿನ ಬನಶಂಕರಿ ಲೇ ಔಟ್ ನಿವಾಸಿಗಳೆಂದು ತಿಳಿದು ಬಂದಿದೆ. ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top