ಉಡುಪಿ: ಸಮಾಜರತ್ನ ಕಾಪು ಲೀಲಾಧರ ಶೆಟ್ಟಿ ಅವರ ಸಾಕು ಮಗಳು ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಪು ಪೊಲೀಸರು ಆಕೆಯ ಸ್ನೇಹಿತ ಸೇರಿದಂತೆ ನಾಲ್ವರನ್ನು ಕಾಸರಗೋಡು ಜಿಲ್ಲೆಯ ಕುಂಬ್ಳೆ ಬಳಿ ಬಂಧಿಸಿದ್ದಾರೆ.
ಸ್ನೇಹಿತ ಶಿರ್ವ ನಿವಾಸಿ ಗೀರಿಶ್ (20), ಮತ್ತು ನಾಪತ್ತೆಯಾಗಲು ಸಹಕರಿಸಿದ ಶಿರ್ವ ನಿವಾಸಿ ರೂಪೇಶ್ (22), ಜಯಂತ್ (23) ಹಾಗೂ ಮಜೂರು ನಿವಾಸಿ ಮೊಹ್ಮದ್ ಅಝೀಜ್ ಬಂಧಿತ ಆರೋಪಿಗಳು
ಲೀಲಾಧರ ಶೆಟ್ಟಿಯವರು 16 ವರ್ಷಗಳ ಹಿಂದೆ ಹೆಣ್ಣು ಮಗುವನ್ನು ದತ್ತು ಪಡೆದಿದದ್ದು ಆಕೆ ಮನೆ ಬಿಟ್ಟು ಹೋಗಿದ್ದು ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಸಾಕು ಮಗಳು ನಾಪತ್ತೆಯಾಗಿರುವುದರಿಂದ ಲೀಲಾಧರ ಶೆಟ್ಟಿ ಹಾಗೂ ಅವರ ಪತ್ನಿ ವಸುಂಧರಾ ಎಲ್ ಶೆಟ್ಟಿ ರವರು ಸಮಾಜಕ್ಕೆ ಹೆದರಿಕೊಂಡು, ಮರ್ಯಾದೆಗೆ ಅಂಜಿ ಮನನೊಂದು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಪೊಲೀಸರು ಆರೋಪಿ ಗಿರೀಶ್ ವಿರುದ್ದ ಪೊಕ್ಕೊ, ಅತ್ಯಾಚಾರ ಹಾಗೂ ಅಪಹರಣ ಪ್ರಕರಣಗಳನ್ನು ಹಾಗೂ ಇತರ ಮೂವರ ವಿರುದ್ಧ ಪೋಕ್ಸೋ ಪ್ರಕರಣವನ್ನು ದಾಖಲಿಸಿದ್ದಾರೆ. ಯುವತಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಸೇರಿಸಲಾಗಿದ್ದು, ಕಾಪು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.