ನಳಿಲು: ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಫೆ.17 ರಿಂದ 24 ರತನಕ ನಡೆಯಲಿರುವ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರ ಬಿಡುಗಡೆ ದೇವಸ್ಥಾನದ ವಠಾರದಲ್ಲಿ ಸೋಮವಾರ ನಡೆಯಿತು.
ಹಿರಿಯರಾದ ಚಿಕ್ಕಪ್ಪ ನಾಯ್ಕ್ ಆಮಂತ್ರಣ ಪತ್ರ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಶರತ್ ಕುಮಾರ್ ರೈ ಕಾವು, ಸಂತೋಷ್ ಕುಮಾರ್ ರೈ ಇಳಂತಾಜೆ, ಎಸ್ ಬಿ ಜಯರಾಮ ರೈ, ಮೊಕ್ತೇಸರ ನಾರಾಯಣ ರೈ ಮೊದೆಲ್ಕಾಡಿ, ಚಂದ್ತ ಶೇಖರ ರೈ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ರೈ ನಳೀಲು ಮೊದಲಾದವರು ಉಪಸ್ಥಿತರಿದ್ದರು.
























